ಬೆಂಗಳೂರು : ಮೂರು ದಿನ ಬೆಂಗಳೂರಿನಲ್ಲಿ ನಡೆದ ವಿಶ್ವ ಹೂಡಿಕೆದಾರರ ಸಮಾವೇಶ ಕರ್ನಾಟಕ ಸರ್ಕಾರದ ನಿರೀಕ್ಷೆ ಮೀರಿ ಯಶಸ್ವಿಯಾಗಿದೆ.
ರಾಜ್ಯದಲ್ಲಿ 10.5 ಲಕ್ಷ ಕೋಟಿ ರೂ.ಗೂ ಹೆಚ್ಚು ಹೂಡಿಕೆಯ ಒಪ್ಪಂದಗಳು ಏರ್ಪಟ್ಟಿದೆ. ಈ ಪೈಕಿ 2.83 ಲಕ್ಷ ಕೋಟಿ ಮೊತ್ತದ ಯೋಜನೆಗಳ ಜಾರಿಗೆ ಏಕಗವಾಕ್ಷಿ ಯೋಜನೆಯಡಿ ರಾಜ್ಯ ಸರ್ಕಾರ ತಕ್ಷಣ ಅನುಮೋದನೆ ನೀಡಿದೆ.
ಈ ಜಿಮ್ ಸಮಾವೇಶದಲ್ಲಿ 7 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಹರಿದು ಬರುವ ನಿರೀಕ್ಷೆಯನ್ನು ರಾಜ್ಯ ಸರ್ಕಾರ ಇಟ್ಟುಕೊಂಡಿತ್ತು.
ಕೊನೆಯ ದಿನವಾದ ಇಂದು ನಡೆದ ಸಮಾರೋಪ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಮತ್ತು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಖುಷಿ ಹಂಚಿಕೊಂಡರು.