ರಾಜಧಾನಿ ಬೆಂಗಳೂರು ಮತ್ತು ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸೂಚನೆ ಹಿನ್ನೆಲೆಯಲ್ಲಿ 10 ಜಿಲ್ಲೆಗಳಲ್ಲಿ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯ ಹವಾಮಾನ ಇಲಾಖೆ ಭಾನುವಾರ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಮೂರ್ನಾಲ್ಕು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೆರಡು ದಿನ ಬೆಂಗಳೂರು ಕರಾವಳಿಯ 3 ಜಿಲ್ಲೆಗಳು ಸೇರಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರದಲ್ಲಿ ಮಳೆ ಹೆಚ್ಚಳ ಆಗಲಿದೆ ಎಂದು ಹೇಳಿದೆ.
ಆ. 30ರವರೆಗೆ ದ.ಕನ್ನಡ, ಉಡುಪಿ, ಉ.ಕನ್ನಡ, ಬೆಂಗಳೂರು, ಬೆಂ ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, ಆ. 31ರಂದು ಕೂಡ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.