Daily Horoscope

Select Your Language

Notifications

webdunia
webdunia
webdunia
webdunia

ಬಿಪಿಎಲ್ ಕಾರ್ಡ್ದಾರರಿಗೆ 10 ಕೆ.ಜಿ ಅಕ್ಕಿ: ಕಾಂಗ್ರೆಸ್ ಘೋಷಣೆ

ಬಿಪಿಎಲ್
ಬೆಂಗಳೂರು : ನಾವು ಅಧಿಕಾರಕ್ಕೆ ಬಂದ ಮೊದಲ ತಿಂಗಳಿನಿಂದಲೇ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ಕಾಂಗ್ರೆಸ್ ಘೋಷಣೆ ಮಾಡಿದೆ.
 
ನಗರದಲ್ಲಿ ಶುಕ್ರವಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಡಿಕೆಶಿ, ಬಹಳ ಪವಿತ್ರವಾದ ದಿನ ಇವತ್ತು. ವಿಧಾನಸಭೆ ಅಧಿವೇಶನ ಕೂಡ ಮುಗಿಯುತ್ತಿದೆ.

ಬಿಜೆಪಿಯ ಕೊನೆಯ ದಿನಕ್ಕೆ ಈ ದಿನ ಕೂಡ ಸಾಕ್ಷಿಯಾಗಲಿದೆ. ಈಗಾಗಲೇ ಎರಡು ಗ್ಯಾರಂಟಿ ಘೋಷಣೆ ಮಾಡಿದ್ದೇವೆ. ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆ ಯೋಜನೆ ಘೋಷಣೆ ಮಾಡಿದ್ದೇವೆ. ನಮ್ಮ ತುರ್ತು ಪತ್ರಿಕಾಗೋಷ್ಠಿಯ ಮೂರನೇ ಘೋಷಣೆ ಅಂದರೆ ಅನ್ನ ಭಾಗ್ಯದ ಅಕ್ಕಿ 7 ಕೆ.ಜಿಯಿಂದ 5 ಕೆ.ಜಿಗೆ ಇಳಿಸಿದ್ದಾರೆ.

ಆದ್ದರಿಂದ ಮೂರನೇ ಗ್ಯಾರಂಟಿ ಪ್ರಕಟಿಸುತ್ತಿದ್ದೇವೆ. ಜನರ ಹಸಿವು ನೀಗಿಸಲು ಅನ್ನಭಾಗ್ಯ ಅಕ್ಕಿ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ಕೊಡಲು ಕಾಂಗ್ರೆಸ್ ಮೂರನೇ ಗ್ಯಾರಂಟಿ ನೀಡಲಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ 10 ಕೆ.ಜಿ ಅಕ್ಕಿ ಕೊಡುತ್ತೇವೆ ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರಕ್ಕೆ ತರುವ ವಿಶ್ವಾಸದೊಂದಿಗೆ ಹೋಗುತ್ತಿದ್ದೇನೆ : ಯಡಿಯೂರಪ್ಪ