Select Your Language

Notifications

webdunia
webdunia
webdunia
webdunia

ರಾಮೇಶ್ವರಂ ಕೆಫೆಯ ಸ್ಪೋಟದ ಆರೋಪಿಯ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ

ರಾಮೇಶ್ವರಂ ಕೆಫೆ

geetha

bangalore , ಬುಧವಾರ, 6 ಮಾರ್ಚ್ 2024 (17:00 IST)
ಬೆಂಗಳೂರು-ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ಇದೀಗ ಬಾಂಬರ್​ ಫೋಟೋ ಬಿಡುಗಡೆ ಮಾಡಿದೆ. ಅಲ್ಲದೇ ಈ ಬಾಂಬರ್​ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ.
 
ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ, ಶಂಕಿತ ಉಗ್ರ ಇನ್ನೂ ಪತ್ತೆಯಾಗಿಲ್ಲ. ಬಾಂಬರ್ ಪತ್ತೆಗಾಗಿ ಪೊಲೀಸರ ತಂಡ ಶೋಧ ನಡೆಸುತ್ತಿದೆ. ಈ ಮಧ್ಯೆ ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ಇದೀಗ ಬಾಂಬರ್​ ಫೋಟೋ ಬಿಡುಗಡೆ ಮಾಡಿದೆ.
 
ಸಿಸಿಬಿ ತನಿಖೆ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಫೋಟೋ ಪತ್ತೆಯಾಗಿದ್ದು, ಇದೀಗ ಆ ಫೋಟೋವನ್ನು ಎನ್​ಐಎ ಬಿಡುಗಡೆ ಮಾಡಿದೆ. ಅಲ್ಲದೇ ಆರೋಪಿ ಬಗ್ಗೆ ಗೊತ್ತಿದ್ದರೆ ಕೂಡಲೇ 080-29510900, 8904241100 ಸಂಖ್ಯೆಗೆ ಫೋನ್‌ ಮಾಡಿ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಎನ್‌ಐಎ ಮನವಿ ಮಾಡಿದೆ. ಆರಂಭದಲ್ಲಿ ಪೊಲೀಸರು, ಎಲ್ಲಾ ಸಿಸಿಟಿಗಳ ಪರಿಶೀಲನೆ ಮಾಡಿದಾಗ ಆರೋಪಿ, ಕ್ಯಾಪ್, ಮಾಸ್ಕ್ ಚೆಸ್ಮಾ ಹಾಕಿರುವ ದೃಶ್ಯಗಳೇ ಸಿಕ್ಕಿದ್ದವು. ಆದ್ರೆ,  ಸಿಸಿಬಿ ತನಿಖೆಯ ವೇಳೆ ಬಾಂಬರ್ ಮಾಸ್ಕ್ ಹಾಕಿಕೊಳ್ಳದ ಒಂದು ಫೋಟೋವನ್ನು ಪತ್ತೆ ಮಾಡಿದೆ. 
 
ಕೆಫೆ ಬಾಂಬ್ ಸ್ಫೋಟದ ತನಿಖೆಯನ್ನ NIA ಅಧಿಕಾರಿಗಳು ಅಧಿಕೃತವಾಗಿ ಕೈಗೆತ್ತಿಕೊಂಡಿದ್ದು, ನಿನ್ನೆ ಕೆಫೆಗೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದೆ. ಕ್ಯಾಶ್ ಕೌಂಟರ್, ಸಿಸಿಕ್ಯಾಮರಾ ಪರಿಶೀಲನೆ ನಡೆಸಿ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಸಹ ಸ್ಥಳದಲ್ಲಿ ಕಲೆ ಹಾಕಿರುವ 38 ಸ್ಯಾಂಪಲ್‌ಗಳ ಮಾಹಿತಿಯನ್ನ NIA ಅಧಿಕಾರಿಗಳಿಗೆ ನೀಡಿದ್ದಾರೆ.ಇನ್ನು  ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್​ಐಎ ಅಧಿಕಾರಿಗಳು ಎಲ್ಲೆಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೆಬ್ಬಾರ್‌ ಒಬ್ಬರೇ ಅಲ್ಲ, ಇನ್ನಷ್ಟು ಜನ ಬರಲಿದ್ದಾರೆ – ಡಿಕೆಶಿ