Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 1000 ಚಾರ್ಜಿಂಗ್ ಸೌಲಭ್ಯ ಸ್ಥಾಪನೆ

ರಾಜ್ಯದಲ್ಲಿ 1000 ಚಾರ್ಜಿಂಗ್ ಸೌಲಭ್ಯ ಸ್ಥಾಪನೆ
ಬೆಂಗಳೂರು , ಗುರುವಾರ, 3 ಫೆಬ್ರವರಿ 2022 (16:57 IST)
ರಾಜ್ಯದಲ್ಲಿ ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಮೆ. ಎಥರ್ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಹಿ ಮಾಡಲಾಯಿತು.
 
ಈ ಚಾರ್ಜಿಂಗ್ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂಗಳು ನೀಡಲಿದ್ದು, ಸರ್ಕಾರಿ ಸಂಸ್ಥೆಗಳು ಈ ಸೌಲಭ್ಯ ಸ್ಥಾಪನೆಗೆ ಸ್ಥಳಾವಕಾಶ ಒದಗಿಸಲು ಎಸ್ಕಾಂಗಳೊಂದಿಗೆ ಸಮನ್ವಯ ವಹಿಸಲಿವೆ.
ಎಥರ್ ಎನರ್ಜಿ ಕಂಪನಿಯು ವಿದ್ಯುತ್ ದ್ವಿಚಕ್ರ ವಾಹನಗಳಿಗೆ ಉಚಿತವಾಗಿ ಚಾರ್ಜಿಂಗ್ ಸೌಲಭ್ಯಗಳನ್ನು ಕಲ್ಪಿಸಲಿವೆ.
 
ಎಥರ್ ಎನರ್ಜಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ತರುಣ್ ಮೆಹ್ತಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಈ ಒಪ್ಪಂದಕ್ಕೆ ಸಹಿ ಮಾಡಿದರು.
 
ಶಾಸಕ ಅರವಿಂದ ಬೆಲ್ಲದ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೆಲಸದ ಕಚೇರಿಯಲ್ಲಿ ಯುವತಿ ಆತ್ಮಹತ್ಯೆ