Select Your Language

Notifications

webdunia
webdunia
webdunia
webdunia

110 ರೂ. ದಾಟಿ ಮುನ್ನುಗ್ಗುತ್ತಿರುವ ಪೆಟ್ರೋಲ್- ಡೀಸೆಲ್ ಬೆಲೆಯೂ ಏರಿಕೆ !

110 Rs. Patrol rushing past
bangalore , ಬುಧವಾರ, 6 ಏಪ್ರಿಲ್ 2022 (18:20 IST)
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಸತತವಾಗಿ ಏರಿಕೆ ಮಾಡಲಾಗುತ್ತಿದ್ದು, ಇಂದು ಕೂಡ (ಏಪ್ರಿಲ್ 6, 2022) ಇಂಧನ ದರದಲ್ಲಿ ಮತ್ತೆ ಹೆಚ್ಚಳವಾಗಿದೆ. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಸತತವಾಗಿ ಹೆಚ್ಚುತ್ತಲೇ ಇದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಏರುತ್ತಲೇ ಇದೆ. ಅದರ ಪರಿಣಾಮ ಕಳೆದ ಎರಡು ವಾರಗಳಲ್ಲಿ (16 ದಿನ) ಪೆಟ್ರೋಲ್ ಬೆಲೆ ಪ್ರತಿ ಲೀಟರ್​ಗೆ ಸರಾಸರಿ ₹ 10 ರಷ್ಟು ಹೆಚ್ಚಾಗಿದೆ. ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್​ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಗಿಯಿತು. ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್​ಗೆ 50 ಮತ್ತು 30, ಮತ್ತೆ 80 ಪೈಸೆಯಷ್ಟು ಹೆಚ್ಚಿಸಲಾಗುತ್ತಿದೆ. ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲಯನ್ನು ಲೀಟರ್​ಗೆ 80 ಪೈಸೆಯಷ್ಟು ಹೆಚ್ಚಿಸಲಾಗಿದೆ.
 
ದೆಹಲಿಯಲ್ಲಿಂದು ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆ ₹ 96.67 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್​ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.95 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.04 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ.ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 111.16 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.86 ರೂಪಾಯಿ ದಾಖಲಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 105.49 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 116.92 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 103.69 ರೂಪಾಯಿ ನಿಗದಿಯಾಗಿದೆ.
 
ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.  ಸ್ಥಳೀಯ ಚಿಲ್ಲರೆ ಮಾರಾಟ ದರಕ್ಕೆ ಅನುಗುಣವಾಗಿ ಪ್ರತಿ ರಾಜ್ಯದಲ್ಲಿಯೂ ಪೆಟ್ರೋಲ್-ಡೀಸೆಲ್ ದರಗಳಲ್ಲಿ ವ್ಯತ್ಯಾಸ ಆಗುತ್ತದೆ.
 
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ:
 
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಡಿಯುವ ನೀರಿಗೆ ಭಿಕ್ಷೆ ಬೇಡುವ ಪರಿಸ್ಥಿತಿ- ಹೆಚ್. ಡಿ. ದೇವೇಗೌಡ