Publish Date: Sat, 01 Apr 2023 (12:46 IST)
Updated Date: Sat, 01 Apr 2023 (13:41 IST)
ತುಮಕೂರು : ಇಂದು ಸಿದ್ದಗಂಗಾ ಮಠದ ಶಿವಕುಮಾರ ಶ್ರೀಗಳ 116 ನೇ ಜನ್ಮದಿನೋತ್ಸವ ಹಿನ್ನೆಲೆಯಲ್ಲಿ ಸಿದ್ದಲಿಂಗ ಸ್ವಾಮೀಜಿಯವರು ಶಿವಕುಮಾರ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.
ವಿವಿಧ ಮಠಾಧೀಶರ ಸಮ್ಮುಖದಲ್ಲಿ ಮಂತ್ರಘೋಷಗಳಿಂದ ಪೂಜೆ ನಡೆಯಿತು. ಗದ್ದುಗೆಗೆ ಫಲ-ಪುಷ್ಪಗಳಿಂದ ಅಲಂಕಾರ ಮಾಡಲಾಯಿತು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗಿಯಾದರು.
ಜಯಂತಿ ಹಿನ್ನೆಲೆಯಲ್ಲಿ ಬೆಳಗ್ಗೆ 8 ಗಂಟೆ ಸುಮಾರಿಗೆ ರುದ್ರಾಕ್ಷಿ ಮಂಟಪದಲ್ಲಿ ಶ್ರೀಗಳ ಪ್ರತಿಮೆ ಇಟ್ಟು ಮೆರವಣಿಗೆ ಮಾಡಲಾಯಿತು. ಬೆಳಗ್ಗೆ 11 ಗಂಟೆಗೆ ಶ್ರೀ ಗೋಸಲಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಿತು. ನೀತಿ ಸಂಹಿತೆ ಇರುವುದರಿಂದ ರಾಜಕಾರಣಿಗಳಿಗೆ ಆಹ್ವಾನ ನೀಡಿಲ್ಲ.
ಹೀಗಾಗಿ ರಾಜಕರಣಿಗಳು, ಜನಪ್ರತಿನಿಧಿಗಳು ಭಾಗಿಯಾಗಿಲ್ಲ. ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀ, ಸುತ್ತೂರು ಮಠದ ಶ್ರೀ ಗಳ ಸಾನಿಧ್ಯ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸೇರಿದಂತೆ ಭಕ್ತರು ಭಾಗಿಯಾದರು. ಪರಮಪೂಜ್ಯರ ಪುಣ್ಯದ ಕಾರ್ಯಗಳನ್ನು ಶ್ರೀಮಠ ಮುಂದುವರಿಸಿಕೊಂಡು ಹೋಗಲಾಗುತ್ತಿದೆ.