Publish Date: Sun, 22 Aug 2021 (18:36 IST)
Updated Date: Sun, 22 Aug 2021 (18:40 IST)
ರಾಜ್ಯದಲ್ಲಿ ಕಳೆದ ಒಂದು ದಿನದಲ್ಲಿ 1189 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 22 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ ದಿನ 1456 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 300 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 20,556ಕ್ಕೆ ಕುಸಿದಿದ್ದರೆ ಬೆಂಗಳೂರಿನಲ್ಲಿ 7756 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ 267 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದರೆ ಇಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,38,616ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 37,145ಕ್ಕೆ ಜಿಗಿತ ಕಂಡಿದೆ. ದಕ್ಷಿಣ ಕನ್ನಡದಲ್ಲಿ ನಾಲ್ವರು ಕೊರೊನಾಗೆ ಬಲಿಯಾಗಿದ್ದು, ಬೆಂಗಳೂರನ್ನು ಹಿಂದಿಕ್ಕಿದೆ.