Webdunia - Bharat's app for daily news and videos

Install App

ವರ್ಷಕ್ಕೆ 12 ಎಲ್‌ಪಿಜಿ ಸಿಲಿಂಡರ್

Webdunia
ಗುರುವಾರ, 29 ಸೆಪ್ಟಂಬರ್ 2022 (14:09 IST)
ಎಲ್‌ಪಿಜಿ ಸಿಲಿಂಡರ್ ಅನ್ನು ಹೊಂದಿರುವ ಬಳಕೆದಾರರು ಒಂದು ತಿಂಗಳಿನಲ್ಲಿ ಎರಡು ಸಿಲಿಂಡರ್ ಪಡೆದುಕೊಳ್ಳುವುದಕ್ಕೆ ಅವಕಾಶವಿದೆ. ಆದರೆ ಒಂದು ವರ್ಷದಲ್ಲಿ 15ಕ್ಕಿಂತ ಹೆಚ್ಚು ಸಿಲಿಂಡರ್ ಅನ್ನು ಪಡೆಯಲು ಸಾಧ್ಯವಿಲ್ಲ ಎಂದು ತಿಳಿದು ಬಂದಿದೆ.
ದೇಶದಲ್ಲಿ ಇದುವರೆಗೂ ಸಬ್ಸಿಡಿ ರಹಿತ ಸಂಪರ್ಕವನ್ನು ಹೊಂದಿರುವ ಗ್ರಾಹಕರು ತಮ್ಮಿಷ್ಟದಂತೆ ಗ್ಯಾಸ್ ಭರ್ತಿ ಮಾಡಿಸಿಕೊಳ್ಳಬಹುದಿತ್ತು. ಆದರೆ ಹೀಗೆ ಪಡೆದುಕೊಳ್ಳುವ ಸಿಲಿಂಡರ್ ಅನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಬಗ್ಗೆ ಸಾಲು ಸಾಲು ದೂರುಗಳು ಕೇಳಿ ಬಂದಿದ್ದವು. ಆದ್ದರಿಂದ ಗ್ಯಾಸ್ ಭರ್ತಿಗೆ ಒಂದು ಮಿತಿಯನ್ನು ನಿಗದಿಪಡಿಸುವುದಕ್ಕೆ ಪೂರೈಕೆದಾರರು ನಿರ್ಧರಿಸಿದ್ದಾರೆ.
ಭಾರತದಲ್ಲಿ ಹೊಸ ಕಾನೂನಿನ ಪ್ರಕಾರ, ಸಬ್ಸಿಡಿ ಹೊಂದಿರುವ ಗೃಹ ಬಳಕೆಯ ಗ್ಯಾಸ್ ಅಡಿಯಲ್ಲಿ ನೋಂದಾಯಿಸಲ್ಪಟ್ಟ ಗ್ರಾಹಕರು ಒಂದು ವರ್ಷಕ್ಕೆ ಕೇವಲ 12 ಸಿಲಿಂಡರ್‌ಗಳನ್ನು ಪಡೆದುಕೊಳ್ಳಲು ಅರ್ಹರಾಗುತ್ತಾರೆ. ಹೆಚ್ಚುವರಿ ಸಿಲಿಂಡರ್ ಅಗತ್ಯವಿದ್ದಲ್ಲಿ ಅವರು ಸಬ್ಸಿಡಿ ರಹಿತ ಸಿಲಿಂಡರ್‌ಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.
 
ಇನ್ನು ವಿತರಕರ ಪ್ರಕಾರ, ಒಂದು ಸಿಲಿಂಡರ್ ಸಂಪರ್ಕದ ಅಡಿಯಲ್ಲಿ ಒಂದು ತಿಂಗಳಲ್ಲಿ ಎರಡು ಸಿಲಿಂಡರ್‌ಗಳನ್ನು ಮಾತ್ರ ತೆಗೆದುಕೊಳ್ಳಬಹುದು ಮತ್ತು ಯಾವುದೇ ಸಂದರ್ಭದಲ್ಲೂ 12ರ ಮಿತಿಯನ್ನು ಹೆಚ್ಚಿಸಲಾಗುವುದಿಲ್ಲ.
 
ಗ್ರಾಹಕರು ಹೆಚ್ಚುವರಿ ಗ್ಯಾಸ್ ಅಗತ್ಯವನ್ನು ಹೊಂದಿದ್ದರೆ, ಅವರು ಹೆಚ್ಚುವರಿ ಅವಶ್ಯಕತೆಯ ಪುರಾವೆಯನ್ನು ತೋರಿಸಬೇಕಾಗುತ್ತದೆ. ಆಗ ಮಾತ್ರ ಬಳಕೆದಾರರಿಗೆ ಮಿತಿಯನ್ನು ಹೆಚ್ಚಿಸಬಹುದು ಎಂದು ಆಗ್ರಾ ವಿಭಾಗದ ಇಂಡೇನ್ ವಿತರಕರ ಸಂಘದ ಅಧ್ಯಕ್ಷ ವಿಪುಲ್ ಪುರೋಹಿತ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments