Publish Date: Fri, 06 Mar 2020 (14:03 IST)
Updated Date: Fri, 06 Mar 2020 (14:08 IST)
ಎರಡು ಕಾರ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕು ಬ್ಯಾಲದಕೆರೆ ಬಳಿ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹದಿಮೂರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬ್ಯಾಲದಕೆರೆ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ರಾಮನಗರ ಜಿಲ್ಲೆಯ ಪ್ರವಾಸಿಗರಿದ್ದ ಟವೇರಾ- ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಟವೇರಾನಲ್ಲಿದ್ದ ತಮಿಳು ನಾಡು ಮೂಲದ ಪ್ರವಾಸಿಗರು ಸಾವನ್ನಪ್ಪಿದ್ದಾರೆ.
ಮೃತರ ಹೆಸರುಗಳು : ಮಂಜುನಾಥ್ (35), ತನುಜ (25), ಒಂದು ವರ್ಷದ ಹೆಣ್ಣು ಮಗು, ಗೌರಮ್ಮ (60), ರತ್ನಮ್ಮ (52), ಸೌಂದರರಾಜ್ (48), ರಾಜೇಂದ್ರ (27), ಸರಳ (32), ಪ್ರಶನ್ಯಾ (14), ಲಕ್ಷ್ಮಿ ಕಾಂತ್ (24), ಸಂದೀಪ (36), ಮಧು (28).
ಇನ್ನು ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್ಪಿ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.