Publish Date: Wed, 29 Dec 2021 (20:13 IST)
Updated Date: Wed, 29 Dec 2021 (20:22 IST)
ಜಿಲ್ಲೆಯಲ್ಲಿ ಬುಧವಾರ 13 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 13 ಪ್ರಕರಣಗಳು ಆರ್ ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 01, ವಿರಾಜಪೇಟೆ ತಾಲೂಕಿನಲ್ಲಿ 07, ಸೋಮವಾರಪೇಟೆ ತಾಲೂಕಿನಲ್ಲಿ 05 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ.
ಜಿಲ್ಲೆಯಲ್ಲಿ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 35,919 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 01 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 35,220 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು 438 ಮರಣ ಪ್ರಕರಣಗಳು ವರದಿಯಾಗಿದೆ. 261 ಸಕ್ರಿಯ ಪ್ರಕರಣಗಳು, ಕಳೆದ 24 ಗಂಟೆಗಳ ಕಾಲ ಸಾವು ಸಂಭವಿಸಿಲ್ಲ, ಕಂಟೈನ್‌ಮೆಂಟ್ ವಲಯಗಳ ಸಂಖ್ಯೆ 44 ಆಗಿದೆ. ಜಿಲ್ಲೆಯ ಕೋವಿಡ್ ಪಾಸಿಟಿವಿಟಿ ದರ ಶೇ.0.54 ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚಿಸಿದರು.