Publish Date: Sun, 10 Mar 2019 (06:48 IST)
Updated Date: Sun, 10 Mar 2019 (06:50 IST)
ದಕ್ಷಿಣ ಕನ್ನಡ : 17 ವರ್ಷದ ಅಪ್ರಾಪ್ತನೊಬ್ಬ ತನ್ನ 13 ವರ್ಷದ ಸಹೋದರಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ವಿಟ್ಲದಲ್ಲಿ ನಡೆದಿದೆ.
ಶಾಲಾ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡುವ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ದಾದಿಯೊಬ್ಬರಿಗೆ ಬಾಲಕಿಯ ಅಸಹಜ ನಡವಳಿಕೆ ಕಂಡು ಅನುಮಾನದಿಂದ ಹೆಚ್ಚಿನ ತಪಾಸಣೆಗಾಗಿ ಮಂಗಳೂರು ಆಸ್ಪತ್ರೆಗೆ ಕಳುಹಿಸಿದಾಗ ಆಕೆ 4 ತಿಂಗಳ ಗರ್ಭಿಣಿ ಎಂಬುದು ತಿಳಿದುಬಂದಿದೆ.
ಬಾಲಕಿಯನ್ನು ವಿಚಾರಣೆ ನಡೆಸಿದಾಗ ತನ್ನ ಸಹೋದರನ ನೀಚ ಕೃತ್ಯದ ಬಗ್ಗೆ ತಿಳಿಸಿದ್ದಾಳೆ. ತಕ್ಷಣ ಆತನನ್ನು ವಶಕ್ಕೆ ಪಡೆದಿರುವ ಪೊಲೀಸರು ಬಾಲ ನ್ಯಾಯ ಮಂಡಳಿ ಪಾಲನಾ ಕೇಂದ್ರಕ್ಕೆ ಕಳುಹಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.