Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 1301 ಮಂದಿಗೆ ಸೋಂಕು, 17 ಮಂದಿ ಬಲಿ

1310 new corona positive
bangalore , ಶುಕ್ರವಾರ, 27 ಆಗಸ್ಟ್ 2021 (20:52 IST)
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1301 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 17 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,44,764ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 37,248ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 1614 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,88,520ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 18,970ಕ್ಕೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ 386 ಸೋಂಕು ಪ್ರಕರಣಗಳು ಕಂಡು ಬಂದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕಾಕತಾಳೀಯ ಎಂಬಂತೆ ಡಿಸ್ಚಾರ್ಜ್ ಸಂಖ್ಯೆಯೂ 386 ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೆದುಳಿನ ರಕ್ತಸ್ರಾವದಿಂದ 11 ವರ್ಷದ ಬಾಲಕಿ ಸಾವು