Publish Date: Tue, 10 Aug 2021 (18:30 IST)
Updated Date: Tue, 10 Aug 2021 (18:31 IST)
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1338 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 31 ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಮಾಣದಲ್ಲಿ ಅಲ್ಪ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 315 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, 3 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ 1947 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 492 ಮಂದಿ ಚೇತರಿಸಿಕೊಂಡಿದ್ದಾರೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 22,676ಕ್ಕೆ ಇಳಿಕೆಯಾಗಿದೆ.