Select Your Language

Notifications

webdunia
webdunia
webdunia
webdunia

13ನೇ ರಾಷ್ಟ್ರೀಯ ಮತದಾರರ ದಿನಾಚರಣೆ

13ನೇ ರಾಷ್ಟ್ರೀಯ ಮತದಾರರ ದಿನಾಚರಣೆ
bangalore , ಬುಧವಾರ, 25 ಜನವರಿ 2023 (18:02 IST)
ನಗರದ ಟೌನ್ ಹಾಲ್ ನಲ್ಲಿ 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದ್ರು. ಜನರ ಆಶಯ ಮತ್ತು ಆಶೋತ್ತರಗಳಿಗೆ ಅನುಗುಣವಾಗಿ ಸರ್ಕಾರ ಕಾರ್ಯನಿರ್ವಹಿಸುತ್ತದೆ. ಆದ್ದರಿಂದ, ಪ್ರಜಾಪ್ರಭುತ್ವವು ಜನರಿಂದ ಮತ್ತು ಜನರಿಗಾಗಿ ನಡೆಸುವ ಸರ್ಕಾರವಾಗಿದೆ. ಹಾಗಾಗಿ, “ಮತದಾನ ನಮ್ಮ ಹಕ್ಕು ಮಾತ್ರವಲ್ಲ ನಮ್ಮ ಕರ್ತವ್ಯವೂ ಆಗಿದೆ" ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.  ಚುನಾವಣೆಗಳಲ್ಲಿ ಮತದಾನ ಗಣರಾಜ್ಯಕ್ಕೆ ಯಜ್ಞವಿದ್ದಂತೆ. ಒಂದು ವೋಟು ಹಾಕದಿದ್ದರೆ ಏನಾಗುತ್ತದೋ ಎಂದು ಕೆಲವರು ಚುನಾವಣಾ ಸಮಯದಲ್ಲಿ ತಮ್ಮ ಮತವನ್ನು ಬಳಸುವುದಿಲ್ಲ. ವಾಸ್ತವವಾಗಿ, ಹಲವು ಬಾರಿ ಗೆಲುವು ಅಥವಾ ಸೋಲಿನ ನಿರ್ಧಾರವು ಕೇವಲ ಒಂದು ಮತವನ್ನು ಅವಲಂಬಿಸಿರುತ್ತದೆ. ಚುನಾವಣೆಯನ್ನು ಅರ್ಥಪೂರ್ಣಗೊಳಿಸುವಲ್ಲಿ ಎಚ್ಚರಿಕೆಯ ಮತ್ತು ಜಾಗೃತ ಮತದಾರರು ಮಾತ್ರ ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವು