ಮದುವೆ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವಾಹನ ಕಂದಕಕ್ಕೆ ಬಿದ್ದು 14 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದ್ದು, ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ.
ಜನರು ಪ್ರಯಾಣಿಸುತ್ತಿದ್ದ ವಾಹನವು ಸುಖಿಧಾಂಗ್ ರೀತಾ ಸಾಹಿಬ್ ರಸ್ತೆಯ ಬಳಿಯ ಕಂದಕ್ಕೆ ಬಿದ್ದಿದೆ ಎಂದು ಕುಮಾನ್ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಡಿಐಜಿ) ನೀಲೇಶ್ ಆನಂದ್ ಭರ್ನೆ ಅವರು ತಿಳಿಸಿದ್ದಾರೆ.
ಜನರು ಮದುವೆ ಸಮಾರಂಭ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದು, ಈ ವೇಳೆ ವಾಹನ ಕಂದಕಕ್ಕೆ ಬಿದ್ದಿದೆ. ಪರಿಣಾಮವಾಗಿ ವಾಹನದಲ್ಲಿದ್ದವರ ಪೈಕಿ 11 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗಳಾದವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಮತ್ತೆ ಮೂವರು ಮೃತಪಟ್ಟಿದ್ದಾರೆ.