Webdunia - Bharat's app for daily news and videos

Install App

ದೇಶದಲ್ಲಿ ಪ್ರತಿದಿನ 14 ಲಕ್ಷ ಪ್ರಕರಣಗಳು ದಾಖಲಾಗುವ ಸ್ಥಿತಿ ಬರಬಹುದು: ಕೇಂದ್ರ ಸರ್ಕಾರ

Webdunia
ಶನಿವಾರ, 18 ಡಿಸೆಂಬರ್ 2021 (20:09 IST)
ವಿಶ್ವದಲ್ಲಿ ಹಬ್ಬುತ್ತಿರುವ ಕೊರೊನಾ ರೂಪಾಂತರಿ ಬಗ್ಗೆ ಒಕ್ಕೂಟ ಸರ್ಕಾರ ಎಚ್ಚರಿಕೆ ನೀಡಿದೆ. ಓಮಿಕ್ರಾನ್ ಭಾರತದಲ್ಲಿ ಅತ್ಯಂತ ವೇಗವಾಗಿ ಹರಡುತ್ತಿದ್ದು, ಇಲ್ಲಿಯೂ ಬ್ರಿಟನ್ ಮತ್ತು ಫ್ರಾನ್ಸ್‌ನಲ್ಲಿನ ಸ್ಥಿತಿಯೇ ಬಂದರೆ ಪ್ರತಿದಿನ 14 ಲಕ್ಷ ಪ್ರಕರಣಗಳು ದಾಖಲಾಗುವ ಸ್ಥಿತಿ ಬರಬಹುದು ಎಂದು ಕೋವಿಡ್ ಟಾಸ್ಕ್‌ಫೋರ್ಸ್ ಮುಖ್ಯಸ್ಥರು ಹೇಳಿದ್ದಾರೆ.
ದೇಶದಲ್ಲಿ ಪ್ರಸ್ತುತ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 101 ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.
“ಯುಕೆಯಲ್ಲಿ ಸೋಂಕು ಹರಡುವಿಕೆಯ ಪ್ರಮಾಣವನ್ನು ನೋಡಿದರೆ, ಭಾರತದಲ್ಲಿ ಇದೇ ರೀತಿಯ ಏಕಾಏಕಿ ಪ್ರಕರಣಗಳು ವರದಿಯಾದರೆ, ನಮ್ಮ ಜನಸಂಖ್ಯೆಯನ್ನು ಗಮನಿಸಿದರೆ ಪ್ರತಿದಿನ 14 ಲಕ್ಷ ಪ್ರಕರಣಗಳು ದಾಖಲಾಗುತ್ತದೆ. ಫ್ರಾನ್ಸ್ ಪ್ರತಿದಿನ 65,000 ಪ್ರಕರಣಗಳನ್ನು ವರದಿ ಮಾಡುತ್ತಿದೆ. ಇದೇ ಪ್ರಮಾಣದಲ್ಲಿ ನಮ್ಮಲ್ಲಿ ಪ್ರಕರಣಗಳು ವರದಿಯಾದರೆ ದೇಶದ ಜನಸಂಖ್ಯೆ ಆಧಾರದಲ್ಲಿ ಪ್ರತಿದಿನ 13 ಲಕ್ಷ ಪ್ರಕರಣಗಳು ವರದಿಯಾಗುತ್ತವೆ” ಎಂದು ಡಾ. ವಿಕೆ ಪೌಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ.
ಯುಕೆಯಲ್ಲಿ ಪ್ರತಿದಿನ 88,042 ಪ್ರಕರಣಗಳು ವರದಿಯಾಗುತ್ತಿದ್ದು, ಅದರಲ್ಲಿ 2.4% ಪ್ರಕರಣಗಳು ಓಮಿಕ್ರಾನ್ ಸೋಂಕುಗಳಾಗಿವೆ. 80 ಪ್ರತಿಶತದಷ್ಟು ವ್ಯಾಕ್ಸಿನೇಷನ್‌ ಹೊರತಾಗಿಯೂ ಯುರೋಪ್ ಗಂಭೀರ ಹಂತಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ.
ಅನವಶ್ಯಕ ಪ್ರಯಾಣ, ಜನಸಂದಣಿ, ಹೊಸ ವರ್ಷದ ಸಂಭ್ರಮದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ. “ಇದು ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸುವ ಸಮಯವಾಗಿದೆ. ಸಾಮೂಹಿಕ ಸಭೆಗಳನ್ನು ತಪ್ಪಿಸಬೇಕಾಗಿದೆ. ಹಬ್ಬಗಳು ಮತ್ತು ಹೊಸ ವರ್ಷದ ಆಚರಣೆಗಳಲ್ಲಿ ಎಚ್ಚರ ವಹಿಸಬೇಕಿದೆ” ಎಂದು ಡಾ.ಪೌಲ್ ಎಚ್ಚರಿಸಿದ್ದಾರೆ.
ದೇಶದಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳನ್ನು ಹೊಂದಿರುವ ರಾಜ್ಯವಾದ ಮಹಾರಾಷ್ಟ್ರದಲ್ಲಿ ಇಲ್ಲಿಯವರೆಗೆ 40 ಓಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ಕರ್ನಾಟಕ, ಗುಜರಾತ್, ದೆಹಲಿ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಆಂಧ್ರಪ್ರದೇಶಗಳಲ್ಲಿಯೂ ಓಮಿಕ್ರಾನ್ ರೂಪಾಂತರಿ ಪ್ರಕರಣಗಳ ವರದಿಯಾಗಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments