Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 1431 ಮಂದಿಗೆ ಸೋಂಕು, 21 ಮಂದಿ ಬಲಿ

coronavirus

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1431 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 21 ಮಂದಿ ಅಸುನೀಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,29,464ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 36,797ಕ್ಕೆ ಜಿಗಿತ ಕಂಡಿದೆ.

ಒಂದು ದಿನದಲ್ಲಿ 1611 ಸೋಂಕಿತರು ಡಿಸ್ಚಾರ್ಜ್ ಆಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,69,992ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 22,497ಕ್ಕೆ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ 301 ಕೊರೊ

ನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡದಲ್ಲಿ 311 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, ನಾಲ್ವರು ಅಸುನೀಗಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ವಿಜಯ್ ಮಲ್ಯ ಬಂಗಲೆ 52 ಕೋಟಿ ರೂ.ಗೆ ಹರಾಜು!