ಮೇ 31ರ ವರೆಗೆ ಈ ಜಿಲ್ಲೆಯಲ್ಲಿ 144 ನಿಷೇಧಾಜ್ಞೆ ವಿಸ್ತರಣೆ

ಶುಕ್ರವಾರ, 22 ಮೇ 2020 (19:40 IST)
ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈ ಜಿಲ್ಲೆಯಲ್ಲಿ ನಿಷೇಧಾಜ್ಞೆ ಅವಧಿ ವಿಸ್ತರಣೆ ಮಾಡಲಾಗಿದೆ.

ಈಗಾಗಲೇ ಕಲಬುರಗಿ ನಗರದಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಮೇ 31ರ ರಾತ್ರಿ 8 ಗಂಟೆಯವರೆಗೆ  ರವರೆಗೆ ವಿಸ್ತರಿಸಿ  ಕಲಬುರಗಿ ನಗರ ಪೊಲೀಸ್ ಆಯಕ್ತರಾದ ಎನ್. ಸತೀಶಕುಮಾರ ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ಜಾರಿಯಲ್ಲಿರುವ ಕಲಂ 144 ನಿಷೇಧಾಜ್ಞೆಯನ್ನು ಪ್ರತಿದಿನ ರಾತ್ರಿ 7 ರಿಂದ ಬೆಳಗಿನ 7 ಗಂಟೆಯವರೆಗೆ ಹಾಗೂ ಭಾನುವಾರದಂದು ಹೆಚ್ಚುವರಿಯಾಗಿ ಬೆಳಗಿನ 7 ರಿಂದ ಸಂಜೆ 7 ಗಂಟೆಯವರೆಗೆ ಎಲ್ಲಾ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರ  ನಿಷೇಧಿಸಲಾಗಿದೆ.

ಭಾನುವಾರದಂದು ಪೂರ್ಣ ದಿನದ ಲಾಕ್‍ಡೌನ್ ಇರುತ್ತದೆ.


ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಸರಕಾರದಿಂದ ಗುಡ್ ನ್ಯೂಸ್