ದೇಶದಲ್ಲಿ ಇಲ್ಲಿಯವರೆಗೆ 150 ಕೋಟಿ ಕೊರೋನಾ ಡೋಸ್ ನೀಡಲಾಗಿದೆ. ಈ ಮೂಲಕ ಭಾರತ ಐತಿಹಾಸಿಕ ಸಾಧನೆ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಕೋಲ್ಕತ್ತಾದಲ್ಲಿನ ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದ ಪ್ರಧಾನಿ ಮೋದಿ, ವಿಜ್ಞಾನಿಗಳು, ಲಸಿಕೆ ತಯಾರಕರು ಮತ್ತು ಆರೋಗ್ಯ ಕಾರ್ಯಕರ್ತರ ಪ್ರಯತ್ನದಿಂದಾಗಿ ದೇಶವು ಶೂನ್ಯದಿಂದ ಪ್ರಾರಂಭವಾದ ಈ ಪ್ರಯಾಣ ಮೈಲಿಗಲ್ಲನ್ನು ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದರು.
ದೇಶದಲ್ಲಿ ಈಗ 15-18 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನೇಷನ್ ನೀಡಲುಆರಂಭವಾಗಿದ್ದು, ಕೇವಲ 5 ದಿನಗಳಲ್ಲಿ 1.5 ಕೋಟಿಗೂ ಅಧಿಕ ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.
ಚಿತ್ತರಂಜನ್ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯ ಎರಡನೇ ಕ್ಯಾಂಪಸ್ ಅನ್ನು ಉದ್ಘಾಟನೆ ವೇಳೆ ಸಿಎಂ ಮಮತಾ ಬ್ಯಾನರ್ಜಿ ಉಪಸ್ಥಿತರಿದ್ದರು.