Daily Horoscope

Select Your Language

Notifications

webdunia
webdunia
webdunia
webdunia

ಗಣಿನಾಡಲ್ಲಿ ಕೇಂದ್ರ ಸಚಿವ, ಸಿಎಂ ಯಡಿಯೂರಪ್ಪ ಮಾಡ್ತಿರೋದೇನು?

ಆಸ್ಪತ್ರೆ
ಪ್ರಧಾನ  ಮಂತ್ರಿಗಳ ಆರೋಗ್ಯ ಸುರಕ್ಷಾ ಯೋಜನೆಯಡಿ 150 ಕೋಟಿ ರೂಪಾಯಿ ವೆಚ್ಚದಲ್ಲಿ ಬಳ್ಳಾರಿಯಲ್ಲಿ ನಿರ್ಮಿಸಿರುವ 210 ಹಾಸಿಗೆಗಳ ಆಸ್ಪತ್ರೆಗೆ ಚಾಲನೆ ನೀಡಲಾಗುತ್ತಿದೆ.

ಸೂಪರ್ ಸ್ಪೆಷಾಲಿಟಿ ಟ್ರಾಮಾ ಕೇರ್ ಸೆಂಟರ್ (ತುರ್ತು ಚಿಕಿತ್ಸಾ ಘಟಕ)ನ್ನು ಆಗಸ್ಟ್ 31 ರಂದು ಬೆಳಗ್ಗೆ 11.30 ಕ್ಕೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ಸಚಿವ ಡಾ.ಹರ್ಷವರ್ಧನ್ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಎಲೆಕ್ಟ್ರಾನಿಕ್ ಉದ್ಘಾಟನೆ (ಇ-ಉದ್ಘಾಟನೆ) ಮಾಡಲಿದ್ದಾರೆ.

ಕೇಂದ್ರ ಆರೋಗ್ಯ ಖಾತೆಯ ಕೇಂದ್ರ ರಾಜ್ಯ ಸಚಿವ ಅಶ್ವೀನಿಕುಮಾರ್ ಚೌಬೆ, ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸಾಥ್ ನೀಡಲಿದ್ದಾರೆ.

ಬಳ್ಳಾರಿಯ ಟ್ರಾಮಾಕೇರ್ ಕೇಂದ್ರದ ಬಳಿ ನಡೆಯಲಿರುವ ವರ್ಚುವಲ್ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದಸಿಂಗ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಉಪಸ್ಥಿತರಿರಲಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಲಾಕ್ ಡೌನ್ ನಲ್ಲಿ ಪ್ರಿಯಕರನ ಜೊತೆ ಲವ್ವಿ ಡವ್ವಿ ನಡೆಸಿದ ಪತ್ನಿ: ಪತಿ ಮಾಡಿದ್ದೇನು?