Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ 1501 ಕೊರೊನಾ ಸೋಂಕು ದೃಢ; 2039 ಮಂದಿ ಡಿಸ್ಚಾರ್ಜ್

ರಾಜ್ಯದಲ್ಲಿ 1501 ಕೊರೊನಾ ಸೋಂಕು ದೃಢ; 2039 ಮಂದಿ ಡಿಸ್ಚಾರ್ಜ್
bengaluru , ಮಂಗಳವಾರ, 27 ಜುಲೈ 2021 (18:50 IST)

ರಾಜ್ಯದಲ್ಲಿ 1501 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 2039 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 28,97,664ಕ್ಕೆ

. ಒಂದೇ ದಿನದಲ್ಲಿ 32 ಮಂದಿ ಅಸುನೀಗಿದ್ದು ಒಟ್ಟಾರೆ ಸಾವಿನ ಸಂಖ್ಯೆ 36,437ಕ್ಕೆ ಜಿಗಿತ ಕಂಡಿದೆ. ರಾಜ್ಯದಲ್ಲಿ ಒಟ್ಟಾರೆ ಗುಣಮುಖಿತರ ಸಂಖ್ಯೆ 28,38,717ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 22,487ಕ್ಕೆ ಇಳಿಕೆಯಾಗಿದೆ.

ರಾಜಧಾನಿ ಬೆಂಗಳೂರು ನಗರದಲ್ಲಿ 354 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 484 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8047ಕ್ಕೆ ಕುಸಿದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಕೇಂದ್ರ ಸಚಿವ ಆಸ್ಕರ್ ಗೆ ಯಶಸ್ವಿ ಶಸ್ತ್ರಚಿಕಿತ್ಸೆ