Webdunia - Bharat's app for daily news and videos

Install App

ರಾಜಕಾಲುವೆ ತೆರವು 1500ಕೋಟಿ ಬಿಡುಗಡೆ

Webdunia
ಮಂಗಳವಾರ, 15 ಮಾರ್ಚ್ 2022 (15:42 IST)
ಬೆಂಗಳೂರು ಮಹಾನಗರ ಪ್ರದೇಶ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆ, ರಾಜಕಾಲುವೆಗಳ ಅಭಿವೃದ್ಧಿಗೆ ಅಮೃತ ನಗರೋತ್ಥಾನ ಯೋಜನೆಯಡಿ 1500 ಕೋಟಿ ರೂ.
ಬಿಬಿಎಂಪಿ ವತಿಯಿಂದ ಸ್ಥಳೀಯ ಅಗತ್ಯಕ್ಕೆ ತಕ್ಕಂತೆ ಕ್ರಿಯಾ ಯೋಜನೆ ತಯಾರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನಸಭೆಗೆ ತಿಳಿಸಿದರು.
 
ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಉತ್ತರಿಸಿದ ಸಚಿವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆಯಲ್ಲಿ ತುಂಬಿರುವ ಹೂಳು ಮತ್ತು ಘನತ್ಯಾಜ್ಯವನ್ನು ತೆಗೆದು ಮಳೆಗಾಲದಲ್ಲಿ ಉಂಟಾಗುವ ಹಾನಿ ತಡೆಯಲು ಕ್ರಮ ಕೈಗೊಳ್ಳಲಾಗಿದೆ.
 
ಇದಕ್ಕಾಗಿ ಕಳೆದ ಮೂರು ವರ್ಷಗಳಲ್ಲಿ 160.85 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ. 11.83 ಕಿ.ಮೀ ಉದ್ದದ ಪ್ರಥಮ, ದ್ವಿತೀಯ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಂಡಿದ್ದು, ಪ್ರಸ್ತುತ 98.27 ಕಿ.ಮೀ ಉದ್ದದ ರಾಜಕಾಲುವೆ ಅಭಿವೃದ್ಧಿಪಡಿಸಲಾಗಿದೆ. ಉಳಿದ 14.56 ಕಿ.ಮೀ ಉದ್ದದ ರಾಜಕಾಲುವೆಗಳ ಅಭಿವೃದ್ದಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.
 
ರಾಜಕಾಲುವೆಗಳು ಹಾಳಾಗಿದ್ದು, ಸರಿಪಡಿಸಲು ಕಾಂಕ್ರೀಟ್ ಗೋಡೆ ನಿರ್ಮಾಣವಾಗುತ್ತಿದೆ. ಮಳೆ ನೀರು ಬಂದಾಗ ರಾಜಕಾಲುವೆಗಳಿಂದ ಉಂಟಾಗುವ ಹಾನಿ ತಡೆಯಲು ಕೈಗೊಳ್ಳುವ ಕಾಮಗಾರಿಗಳಲ್ಲಿ ತಾರತಮ್ಯ ಮಾಡುತ್ತಿಲ್ಲ. ಸುಮಾರು 100 ಸ್ಥಳಗಳನ್ನು ಗುರುತಿಸಲಾಗಿದ್ದು, ಆದ್ಯತೆ ಮೇಲೆ ಕೈಗೆತ್ತಿಕೊಳ್ಳಲಾಗುವುದು. ಈ ಸಂಬಂಧ ಬಿಡಬ್ಲ್ಯುಎಸ್‍ಎಸ್‍ಬಿ ಜೊತೆ ಸಭೆ ನಡೆಸಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ, ಲ್ಯಾಂಡಿಂಗ್ ವೇಳೆ ರನ್‌ ವೇಯಿಂದ ಜಾರಿದ ಏರ್‌ ಇಂಡಿಯಾ ವಿಮಾನ, ದೊಡ್ಡ ಅವಘಡದಿಂದ ಜಸ್ಟ್‌ ಮಿಸ್‌

ತೆರಿಗೆ ಶಾಕ್‌ಗೆ ಬೆಚ್ಚಿದ ವ್ಯಾಪಾರಿಗಳು, ಜುಲೈ 25ರಂದು ಅಂಗಡಿ, ಮುಂಗಟ್ಟು ಬಂದ್‌ಗೆ ನಿರ್ಧಾರ

ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ಗುರಿಯಾಗಿಸದೆ ಎಸ್‌ಐಟಿ ಕಾಲ ಮಿತಿಯಲ್ಲಿ ತನಿಖೆ ಮಾಡಲಿ: ಬಸವರಾಜ ಬೊಮ್ಮಾಯಿ

ತೇಜಸ್ವಿ ಸೂರ್ಯಗೂ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಆರೋಗ್ಯದಲ್ಲಿ ಏರುಪೇರು: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments