Select Your Language

Notifications

webdunia
webdunia
webdunia
webdunia

LPG ಸಿಲಿಂಡರ್‌ ಬೆಲೆಯಲ್ಲಿ 158 ರೂ. ಇಳಿಕೆ

LPG ಸಿಲಿಂಡರ್‌ ಬೆಲೆಯಲ್ಲಿ 158 ರೂ. ಇಳಿಕೆ
bangalore , ಶನಿವಾರ, 2 ಸೆಪ್ಟಂಬರ್ 2023 (15:40 IST)
ಇತ್ತೀಚೆಗಷ್ಟೇ ಮೋದಿ ಸರ್ಕಾರ ಜನಸಾಮಾನ್ಯರಿಗೆ ಗುಡ್‌ ನ್ಯೂಸ್‌ ಕೊಟ್ಟಿದೆ. ರಕ್ಷಾಬಂಧನ ಹಬ್ಬದ ಪ್ರಯುಕ್ತ 14.2 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 200 ರೂಪಾಯಿ ಕಡಿತಗೊಳಿಸಿತ್ತು. ಇದೀಗ ದೇಶದ ಜನತೆಗೆ ಮತ್ತೊಂದು ಒಳ್ಳೆಯ ಸುದ್ದಿ ಸಿಕ್ಕಿದೆ. ಸೆಪ್ಟೆಂಬರ್‌ 1ರಂದು LPG ಸಿಲಿಂಡರ್‌ ಬೆಲೆಯಲ್ಲಿ ಪರಿಷ್ಕೃತವಾಗಿದ್ದು, ಇಂದು ಬೆಲೆ ಮತ್ತಷ್ಟು ಇಳಿಕೆಯಾಗಿದೆ. ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 158 ರೂಪಾಯಿ ಕಡಿತಗೊಳಿಸಿವೆ ಎಂದು ಮೂಲಗಳು ತಿಳಿಸಿವೆ. ಹೊಸ ಬೆಲೆಗಳು ಇಂದಿನಿಂದ ಜಾರಿಗೆ ಬರಲಿದೆ. ದೆಹಲಿಯಲ್ಲಿ, 19 ಕೆಜಿ ವಾಣಿಜ್ಯ LPG ಸಿಲಿಂಡರ್‌ನ ಚಿಲ್ಲರೆ ಬೆಲೆ ₹ 1,522 ಆಗಿರುತ್ತದೆ. ಅದೇ ರೀತಿ, ಬೆಂಗಳೂರಲ್ಲಿ ಈ ಹಿಂದೆ 19 ಕೆಜಿ ಕಮರ್ಷಿಯಲ್ ಸಿಲಿಂಡರ್ ಬೆಲೆ 1767.50 ರೂಪಾಯಿ ಇತ್ತು. ಇಂದಿನಿಂದ ಪ್ರತಿ 19 ಕೆ.ಜಿ. ಕಮರ್ಷಿಯಲ್ ಸಿಲಿಂಡರ್ ಬೆಲೆ 1609.50 ರೂಪಾಯಿಗೆ ಮಾರಾಟವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ