Publish Date: Mon, 09 Jan 2023 (12:11 IST)
Updated Date: Mon, 09 Jan 2023 (12:13 IST)
ಬೆಂಗಳೂರು : 20 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕೈ ತಪ್ಪುತ್ತಾ..?, ವರ್ಚಸ್ಸು, ವಯಸ್ಸು, ಆಡಳಿತ ವಿರೋಧಿ ಅಲೆಯೇ ಮಾನದಂಡ ಆಗುತ್ತಾ ಎಂಬ ಪ್ರಶ್ನೆಗಳು ಬಿಜೆಪಿಯಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ.
16 ಜಿಲ್ಲೆಗಳಲ್ಲಿ ಬಿಜೆಪಿ ಹಾಲಿ ಶಾಸಕರಿಗೆ ಕೊಕ್ ಕೊಡುವ ಶಾರ್ಟ್ ಲಿಸ್ಟ್ ರೆಡಿ ಆಗ್ತಿದೆ ಎನ್ನಲಾಗಿದ್ದು, ಹೈಕಮಾಂಡ್ ಮುಂದಿರುವ ವರದಿ ಅಸಲಿಯತ್ತಿನ ಬಗ್ಗೆ ಕುತೂಹಲ ಮೂಡಿದೆ. ಚುನಾವಣೆಗೆ ಇನ್ನು ಮೂರೂವರೆ ತಿಂಗಳು ಬಾಕಿ ಇರುವಾಗಲೇ ಟಿಕೆಟ್ ಲೆಕ್ಕಚಾರ ಶುರುವಾಗಿದ್ದು,
ಬಿಜೆಪಿ ಟಿಕೆಟ್ ನೀಡಿಕೆ ಮಾನದಂಡಗಳ ಬಗ್ಗೆ ಪಕ್ಷದ ವೇದಿಕೆಯಲ್ಲೇ ಚರ್ಚೆ ಆಗುತ್ತಿದೆ. ಗುಜರಾತ್ ಮಾಡೆಲ್, ಉತ್ತರ ಪ್ರದೇಶ ಮಾಡೆಲ್ಗಳ ಪ್ರಯೋಗದ ಬಗ್ಗೆ ಆತಂಕ ವ್ಯಕ್ತವಾಗ್ತಿದೆ. ಬರೋಬ್ಬರಿ 20ಕ್ಕೂ ಹೆಚ್ಚು ಶಾಸಕರಿಗೆ ಟಿಕೆಟ್ ಕೈ ತಪ್ಪು ಆತಂಕವಿದೆ ಎನ್ನಲಾಗಿದೆ.