ಆ.16ರಿಂದ 4 ನೂತನ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ

Webdunia
ಭಾನುವಾರ, 8 ಆಗಸ್ಟ್ 2021 (08:16 IST)
ಹುಬ್ಬಳ್ಳಿ (ಆ.08): ರಾಜ್ಯದಲ್ಲಿ ಆ.16ರಿಂದ 4 ದಿನಗಳ ಕಾಲ ಕೇಂದ್ರ ಸರ್ಕಾರದ ನೂತನ ಸಚಿವರ ಜನಾಶೀರ್ವಾದ ಯಾತ್ರೆ ನಡೆಯಲಿದೆ. ಸರ್ಕಾರದ ಯೋಜನೆಗಳ ಜನಜಾಗೃತಿಗಾಗಿ ಈ ಯಾತ್ರೆ ನಡೆಯಲಿದ್ದು, ನೂತನ ಕೇಂದ್ರ ಸಚಿವರಾದ ರಾಜೀವ್ ಚಂದ್ರಶೇಖರ್, ಭಗವಂತ ಖೂಬಾ, ಎ.ನಾರಾಯಣಸ್ವಾಮಿ ಮತ್ತು ಶೋಭಾ ಕರದ್ಲಾಂಜೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ತಿಳಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನೂತನ ಸಚಿವರಿಗೆ ದೇಶಾದ್ಯಂತ ಪ್ರವಾಸ ಕೈಗೊಂಡು, ಸರ್ಕಾರದ ಯೋಜನೆಗಳ ಬಗ್ಗೆ ಜನಜಾಗೃತಿ ಮೂಡಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 16ರಿಂದ 19ರ ವರೆಗೆ ಯಾತ್ರೆ ಕೈಗೊಂಡು ಸಭೆ, ಸಂವಾದಗಳನ್ನು ನಡೆಸಲಿದ್ದಾರೆ ಎಂದು ತಿಳಿಸಿದರು.
ಕೌಶಲ್ಯ ಅಭಿವೃದ್ಧಿ ಖಾತೆ ರಾಜ್ಯ ಸಚಿವ ರಾಜೀವ ಚಂದ್ರಶೇಖರ್ ನೇತೃತ್ವದ ತಂಡ ಆ.16ರಂದು ಹುಬ್ಬಳ್ಳಿಗೆ, 17ರಂದು ಕೊಡಗು, ದಕ್ಷಿಣ ಕನ್ನಡ, 18ರಂದು ಶಿವಮೊಗ್ಗ, ಉತ್ತರ ಕನ್ನಡ ಹಾಗೂ 19ಕ್ಕೆ ಬೆಂಗಳೂರು ನಗರಕ್ಕೆ ಭೇಟಿ ನೀಡಲಿದೆ. ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ನೇತೃತ್ವದ ತಂಡ 16ಕ್ಕೆ ಬಳ್ಳಾರಿ, ಕೊಪ್ಪಳ, 17ಕ್ಕೆ ರಾಯಚೂರು, ಯಾದಗಿರಿ, 18ಕ್ಕೆ ಕಲಬುರಗಿ, ಬೀದರ್ಗೆ, ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆಯ ರಾಜ್ಯ ಸಚಿವ ಎ. ನಾರಾಯಣ ಸ್ವಾಮಿ ನೇತೃತ್ವದ ತಂಡ 17ರಂದು ಬೆಂಗಳೂರು ಗ್ರಾಮೀಣ, ತುಮಕೂರು, 18ಕ್ಕೆ ಚಿತ್ರದುರ್ಗ, ದಾವಣಗೆರೆ, 19ಕ್ಕೆ ಹಾವೇರಿ, ಗದಗ ಹಾಗೂ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರದ್ಲಾಂಜೆ ನೇತೃತ್ವದ ತಂಡ 17ಕ್ಕೆ ಮಂಡ್ಯ, ಚಾಮರಾಜನಗರ, 18ಕ್ಕೆ ಮೈಸೂರು, ಹಾಸನ, 20ಕ್ಕೆ ಉಡುಪಿಗೆ ಭೇಟಿ ನೀಡಲಿದೆ ಎಂದು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಆರ್ ಎಸ್ಎಸ್ ಹೀಗೆ ಬೆದರಿಕೆ ಹಾಕುತ್ತದೆ ಎಂದು ಅಡಿಯೋ ಬಾಂಬ್ ಹಾಕಿದ ಪ್ರಿಯಾಂಕ್ ಖರ್ಗೆ

ರಸ್ತೆ ಸರಿ ಮಾಡಿ ಎಂದರೆ ಉದ್ಯಮಿಗಳಿಗೇ ಬೆದರಿಸುವ ಕಾಂಗ್ರೆಸ್ ಸರ್ಕಾರ: ಸಿಟಿ ರವಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

ಸಿಎಂ ಆಗಬೇಕೆಂದುಕೊಂಡಿರುವ ಡಿಕೆ ಶಿವಕುಮಾರ್ ಗೆ ಹಾಸನಾಂಬೆ ಕೊಟ್ಟ ಸೂಚನೆ ಏನು

ಮುಂದಿನ ಸುದ್ದಿ
Show comments