Select Your Language

Notifications

webdunia
webdunia
webdunia
webdunia

ಇಂಡೋನೇಷ್ಯಾದಲ್ಲಿ ಭೂಕಂಪಕ್ಕೆ 162 ಬಲಿ

ಇಂಡೋನೇಷ್ಯಾದಲ್ಲಿ ಭೂಕಂಪಕ್ಕೆ 162 ಬಲಿ
ಇಂಡೋನೇಷ್ಯಾ , ಮಂಗಳವಾರ, 22 ನವೆಂಬರ್ 2022 (17:59 IST)
ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮಹಿಳೆಯರು, ಮಕ್ಕಳು ಸೇರಿ ಕನಿಷ್ಠ 162 ಮಂದಿ ಮೃತಪಟ್ಟಿದ್ದು, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 5.6 ರಷ್ಟು ತೀತ್ರತೆಯಲ್ಲಿ ಭೂಕಂಪ ಸಂಭವಿಸಿರುವುದಾಗಿ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು. ಆದರೆ ಇದೀಗ ಭೂಕಂಪದ ತೀವ್ರತೆ 6.9ಕ್ಕೆ ತಲುಪಿದ್ದು, ಜನರು ಇನ್ನಷ್ಟು ಆತಂಕಗೊಂಡಿದ್ದಾರೆ. ಹಲವು ಮನೆ, ಕಟ್ಟಡಗಳು ಕುಸಿದು ಬಿದ್ದಿವೆ. ಕೆಲವರು ತಮ್ಮ ಮಕ್ಕಳೊಂದಿಗೆ ಅಳುತ್ತಾ ಮನೆಗಳಿಂದ ಓಡಿ ಬಂದಿದ್ದಾರೆ. ಕಟ್ಟಡಗಳ ಅವಶೇಷಗಳಡಿ ಸಿಲುಕಿದ್ದವರ ಪೈಕಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಜೆದಿಲ್ ಹಳ್ಳಿಯೊಂದರಲ್ಲೇ ಸುಮಾರು 25ಕ್ಕೂ ಹೆಚ್ಚು ಜನರು ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ತಂಡಗಳು, ಕುಸಿದ ಮನೆಗಳ ಅವಶೇಷಗಳಲ್ಲಿ ಹೂತು ಹೋಗಿರುವವರ ಹುಡುಕಾಟ ನಡೆಸಿದ್ದಾರೆ. ರಕ್ಷಣಾ ಕಾರ್ಯ ಕ್ಷಿಪ್ರಗತಿಯಲ್ಲಿ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಕ್ಕಳು ಸೇರಿ ಗಾಯಾಳುಗಳಿಗೆ ಆಸ್ಪತ್ರೆಗಳ ಒಳಗೆ, ಹೊರಗೆ, ಟೆರೇಸ್, ಪಾರ್ಕಿಂಗ್ ಸ್ಥಳಗಳಲ್ಲಿ ಚಿಕಿತ್ಸೆ ನೀಡಲಾಯಿತು. ಸುಮಾರು ಐದು ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ರಾಜಧಾನಿ ಜಕಾರ್ತದಿಂದ 75 ಕಿ.ಮೀ ದೂರದ ಪಶ್ಚಿಮ ಜಾವಾ ಪ್ರಾಂತ್ಯದ ಸಿಯಾಂಜುರ್ ಪ್ರದೇಶದ 10 ಕಿಲೋ ಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಅತ್ಯಾಚಾರಿಗಳ ತಂದೆ-ತಾಯಿಯನ್ನು ಶಿಕ್ಷಿಸಿ- ಬಿಜೆಪಿ MLA ಆಕಾಶ್ ವಿಜಯವರ್ಗಿಯಾ