ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 419 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, 7 ಸೋಂಕಿತರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಂದೇ ದಿನ 2214 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 963 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 25645ಕ್ಕೆ ಇಳಿಕೆಯಾಗಿದೆ.