Select Your Language

Notifications

webdunia
webdunia
webdunia
Thursday, 3 April 2025
webdunia

ವಿಧಾನ ಪರಿಷತ್ ಸದಸ್ಯರಾಗಿ 17 ಸದಸ್ಯರು ಪ್ರಮಾಣ ವಚನ ಸ್ವೀಕಾರ

Legislative Council

Sampriya

ಬೆಂಗಳೂರು , ಸೋಮವಾರ, 24 ಜೂನ್ 2024 (17:49 IST)
Photo Courtesy X
ಬೆಂಗಳೂರು: ವಿಧಾನಸೌಧಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ಕರ್ನಾಟಕದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾಗಿರುವ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

 17 ನೂತನ ವಿಧಾನ ಪರಿಷತ್ ಸದಸ್ಯರಿಗೆ‌ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಪ್ರಮಾಣ ವಚನ ಬೋಧಿಸಿದರು

ಪ್ರಮಾಣ ವಚನ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ, ಕಾನೂನು ಹಾಗೂ ಸಂಸದೀಯ ಸಚಿವ ಎಚ್‌ಕೆ ಪಾಟೀಲ್ ಸೇರಿ ಹಲವರು ಭಾಗಿಯಾದರು. ಇದರೊಂದಿಗೆ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ 11 ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮವೂ ನಡೆಯಿತು.


ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು ನೂತನ ಸದಸ್ಯರನ್ನು ಅಭಿನಂದಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಡಿಬಾಸ್ ಕೈದಿ ನಂ.6106ನ್ನು ವಾಹನಕ್ಕೆ ರಿಜಿಸ್ಟರ್ ಮಾಡಲು ಮುಂದಾದ ದರ್ಶನ್ ಅಭಿಮಾನಿ