Select Your Language

Notifications

webdunia
webdunia
webdunia
webdunia

ಕನ್ನಡ ನಾಮಫಲಕ ಅಳವಡಿಸಿದ 18 ಅಂಗಡಿಗಳಿಗೆ ಬೀಗ

bbmp

geetha

bangalore , ಭಾನುವಾರ, 18 ಫೆಬ್ರವರಿ 2024 (21:05 IST)
ಬೆಂಗಳೂರು : ವಿಧಾನಸಭೆಯಲ್ಲಿ ಕರ್ನಾಟಕದ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯಲ್ಲಿ ಇರೋದು ಕಡ್ಡಾಯಗೊಳಿಸೋ ಮಸೂದೆಗೆ ಅಂಕಿತ ದೊರೆತಿದೆ. ಇನ್ನೂ ವಿಧಾನಪರಿಷತ್ ನಲ್ಲಿ ಪಾಸ್ ಆಗಿ ಕಾಯ್ದೆಯಾಗಿ ಜಾರಿಯಾಗೋದು ಮಾತ್ರ ಬಾಕಿ ಇದೆ. ಇದರ ನಡುವೆ ಬೆಂಗಳೂರಲ್ಲಿ ಕನ್ನಡ ನಾಮಫಲಕ ಅಳವಡಿಸದಂತ 18 ಅಂಗಟಿಗಳಿಗೆ ಬಿಬಿಎಂಪಿ ಬೀಗ ಜಡಿದಿದೆ.
 
ಬೆಂಗಳೂರು ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಬಳಸದ ಉದ್ದಿಮೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಉದ್ದಿಮೆ ಮಾಲೀಕರಿಗೆ ಕೂಡಲೆ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಚನೆ ನೀಡಲಾಗುತ್ತಿದೆ.

ಅದರಂತೆ ಪೂರ್ವ ವಲಯ ವ್ಯಾಪ್ತಿಯಲ್ಲಿ ಇಂದು ಶಾಂತಿನಗರ ಹಾಗೂ ಸಿ.ವಿ ರಾಮನ್‌ನಗರ ವ್ಯಾಪ್ತಿಯಲ್ಲಿ ವಲಯ ಆಯುಕ್ತರಾದ ಶ್ರೀಮತಿ ಸ್ನೇಹಲ್, ವಲಯ ಜಂಟಿ ಆಯುಕ್ತರಾದ ಶ್ರೀಮತಿ ಪಲ್ಲವಿ ರವರ ನಿರ್ದೇಶನದಂತೆ ವಲಯ ಆರೋಗ್ಯಾಧಿಕಾರಿಯಾದ ಡಾ. ಸವಿತಾ ರವರ ನೇತೃತ್ವದಲ್ಲಿ ಆರೋಗ್ಯ ವೈದ್ಯಾಧಿಕಾರಿಗಳ ತಂಡವು ಉದ್ದಿಮೆಗಳನ್ನು ಪರಿಶೀಲಿಸಿ ನಿಯಮಾನುಸಾರ ಶೇ.60% ರಷ್ಟು ಕನ್ನಡ ಭಾಷೆ ನಾಮಫಲಕಗಳನ್ನು ಅಳವಡಿಸದಿರುವ ಉದ್ದಿಮೆಗಳಿಗೆ ಭೇಟಿ ನೀಡಿ ಪರಿಶೀಲಿಸಸಲಾಯಿತು.

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ ಸನ್ನಿ ಲಿಯೋನ್