ಅಥಣಿ, ರಾಯಬಾಗ, ಹುಕ್ಕೇರಿ ಹಾಗೂ ಗೋಕಾಕ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳ ಸುಧಾರಣೆಗೆ ಎಸ್‌ಎಚ್‌ಡಿಪಿ ಯೋಜನೆ ಅಡಿಯಲ್ಲಿ 183 ಕೋಟಿ ರೂಪಾಯಿ ಹಣ ಮಂಜೂರಾಗಿದೆ ಎಂದು ಸಂಸದ ಪ್ರಕಾಶ ಹುಕ್ಕೇರಿ ಹೇಳಿದರು.
ಚಿಕ್ಕೋಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಒಟ್ಟು 9 ರಾಜ್ಯ ಹೆದ್ದಾರಿಗಳಲ್ಲಿ 180 ಕಿಲೋಮೀಟರ್ ನೂತನ ಕಾಮಗಾರಿ ಮಾಡಲಾಗುವುದು. ಪ್ರತಿ 14 ಕಿಲೋಮೀಟರ್ ರಸ್ತೆಗೆ 98.38 ಲಕ್ಷ ರೂಪಾಯಿ ವೆಚ್ಚ ಮಾಡಲಾಗುತ್ತದೆ. 15 ತಿಂಗಳಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವ ಮೂಲಕ ಸಾರ್ವಜನಿಕ ಸೇವೆಗೆ ಸಿದ್ಧಗೊಳಿಸುತ್ತೇವೆ ಎಂದರು.
ಸರಕಾರಿ ರಸ್ತೆಗಳ ಗುಣಮಟ್ಟವನ್ನು ಕಾಪಾಡುವ ಉದ್ದೇಶದಿಂದ ಕ್ಯಾಟಕಾನ್ ಸಂಸ್ಥೆಗೆ ರಸ್ತೆಯ ಜವಾಬ್ದಾರಿ ನೀಡಲಾಗಿದೆ. ರಸ್ತೆ ಗುಣಮಟ್ಟ ನಿರ್ಮಾಣಕ್ಕಾಗಿ ವಿಶೇಷ ಅಧಿಕಾರಿಗಳ ಸಮಿತಿ ರಟನೆ ಮಾಡಲಾಗಿದೆ ಎಂದು ತಿಳಿಸಿದರು.
ಗುಣಮಟ್ಟದ ರಸ್ತೆ ನಿರ್ಮಾಣಕ್ಕಾಗಿ ಲೋಕೋಪಯೋಗಿ ಖಾತೆ ಸಚಿವರಾದ ಎಚ್.ಸಿ.ಮಹಾದೇವಪ್ಪನವರು ವಿಶೇಷ ಅನುದಾನ ಬಿಡುಗಡೆ ಮಾಡಿರುವುದಕ್ಕೆ ಸಂಸದ ಪ್ರಕಾಶ ಹುಕ್ಕೇರಿ ಅವರು ಅಭಿನಂದನೆ ಸಲ್ಲಿಸಿದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.