Select Your Language

Notifications

webdunia
webdunia
webdunia
webdunia

ಬ್ಯಾಂಕ್‌ ಮ್ಯಾನೇಜರ್‌ಗಳಿಂದಲೇ ಯುವತಿಯೆ ಮೇಲೆ ಲೈಂಗಿಕ ದೌರ್ಜನ್ಯ

ಬ್ಯಾಂಕ್‌ ಮ್ಯಾನೇಜರ್‌ಗಳಿಂದಲೇ ಯುವತಿಯೆ ಮೇಲೆ ಲೈಂಗಿಕ ದೌರ್ಜನ್ಯ
ಬೆಂಗಳೂರು , ಸೋಮವಾರ, 28 ಜುಲೈ 2014 (15:15 IST)
ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬ್ಯಾಂಕ್‌ ಮ್ಯಾನೇಜರ್ ಸೇರಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
 
ಈಜಿಪುರಾ ರಿಂಗ್ ರೋಡ್ ರಸ್ತೆಯಲ್ಲಿ ದ್ವಿಚಕ್ರವಾಹನ ಸವಾರರಾಗಿದ್ದ ಇಬ್ಬರು ಆರೋಪಿಗಳು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು 20 ವರ್ಷ ವಯಸ್ಸಿನ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
 
ಸಂಜೆ 7 ಗಂಟೆಗೆ ದ್ವಿಚಕ್ರ ವಾಹನದಲ್ಲಿ ಯುವತಿ ಮನೆಗೆ ತೆರಳುತ್ತಿರುವ ಸಂದರ್ಭದಲ್ಲಿ ಆಕೆಯನ್ನು ತಡೆದ ಇಬ್ಬರು ಆರೋಪಿಗಳು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ತಿಳಿಸಿದ್ದಾರೆ. 
 
ಖಾಸಗಿ ಬ್ಯಾಂಕ್‌ನಲ್ಲಿ ಮ್ಯಾನೇಜರ್‌ ಹುದ್ದೆಯಲ್ಲಿರುವ ಆರೋಪಿ ರೋಹಿತ್ ತಿವಾರಿ, ಆತನ ಸಹದ್ಯೋಗಿ (ಸೇಲ್ಸ್ ಮ್ಯಾನೇಜರ್) ಸಂತೋಷ್ ಪ್ರಭು ಆಂಥೋನಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅದಿಕಾರಿಗಳು ತಿಳಿಸಿದ್ದಾರೆ.    
 

Share this Story:

Follow Webdunia kannada