Select Your Language

Notifications

webdunia
webdunia
webdunia
webdunia

ರಾಜ್ಯಾದ್ಯಂತ 2 ದಿನ ಭಾರೀ ಮಳೆ

ರಾಜ್ಯಾದ್ಯಂತ 2 ದಿನ ಭಾರೀ ಮಳೆ
bangalore , ಸೋಮವಾರ, 17 ಅಕ್ಟೋಬರ್ 2022 (14:35 IST)
ಕಳೆದೊಂದು ವಾರದಿಂದ ರಾಜ್ಯಾದ್ಯಂತ ಧಾರಾಕಾರ ಮಳೆಯಾಗ್ತಿದೆ. ಇನ್ನೂ, 2 ದಿನ ಭಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಅಕ್ಟೋಬರ್​ 19ರವರೆಗೂ ಮಳೆಯಾಗಲಿದೆ. ಬೆಳಗಾವಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಸೇರಿ 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ಗದಗ, ರಾಯಚೂರು, ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಿಲ್ಲಾಧಿಕಾರಿಯೊಂದಿಗೆ ಸಭೆ ನಡೆದಿದ ಸಿಎಂ