Publish Date: Tue, 23 May 2017 (15:24 IST)
Updated Date: Tue, 23 May 2017 (16:00 IST)
ಕಲಬುರಗಿ:ನಿಂತಿದ್ದ ಲಾರಿಗೆ ಮದುವೆ ದಿಬ್ಬಣದ ಕಾರು ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮದುಮಗಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.
ಜೇವರ್ಗಿ ತಾಲೂಕಿನ ಮಂದೇವಾಲಾ ಎಂಬಲ್ಲಿ ಮದುವೆ ದಿಬ್ಬಣದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದರು. ಮದುಮಗಳಾದ ಜ್ಯೋತಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮದುಮಗಳು ಜ್ಯೋತಿ ಸಾವನ್ನಪ್ಪಿದ್ದಾರೆ.
ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.