ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಗೆ ಉಲ್ಲಾಳ ಕ್ರಾಸ್ ನಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿಧರ್, ನಗರದಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದ ಹಲವು ಪ್ರದೇಶಗಳಿಗೆ ನೀರು ನುಗ್ಗಿದೆ. ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಬೆಂಗಳೂರಿನಲ್ಲಿ ಮಳೆಯಿಂದ ಹಾನಿ ಕುರಿತು 250ರಿಂದ 300 ದೂರುಗಳು ಬಂದಿದ್ದು, ಸುಮಾರು 2000 ಮನೆಗಳಿಗೆ ನೀರು ನುಗ್ಗಿದೆ. ಉಳ್ಳಾಲ ಉಪನಗರದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದರು.