Select Your Language

Notifications

webdunia
webdunia
webdunia
webdunia

2 ಲಕ್ಷ ಮೆಟ್ರಿಕ್‌ ಟನ್‌ ರಾಗಿ ಖರೀದಿಗೆ ಸೂಚನೆ: ಸಿಎಂ ಬೊಮ್ಮಾಯಿ

bommai ragi bengaluru
bengaluru , ಗುರುವಾರ, 5 ಮೇ 2022 (13:21 IST)
ರೈತರಿಂದ ರಾಗಿ ಖರೀದಿಗೆ ಸೂಚನೆ ನೀಡಲಾಗಿದ್ದು, 2 ಲಕ್ಷ ಮೆಟ್ರಿಕ್ ಟನ್  ಹೆಚ್ಚುವರಿಯಾಗಿ ರಾಗಿ ಖರೀದಿಸಲು ನೋಂದಣಿ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್‌ ನಲ್ಲಿ ಘೋಷಿಸಲಾದ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಚರ್ಚೆ ನಡೆಯುತ್ತಿದ್ದು, ಬಜೆಟ್‌ ಅನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ಜಾರಿಗೆ ತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಇದೇ ವೇಳೆ ಪಿಎಸ್‌ ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಅಶ್ವಥ್ ನಾರಾಯಣ ವಿರುದ್ಧ ಕಾಂಗ್ರೆಸ್ ಮಾಡಿರುವ ಆರೋಪಗಳು ಆಧಾರ ರಹಿತವಾಗಿವೆ ಎಂದು ಬೊಮ್ಮಾಯಿ ಸಮರ್ಥಿಸಿಕೊಂಡರು.
ಕಾಂಗ್ರೆಸ್ ನವರು ಹಿಟ್ ಅಂಡ್ ರನ್ ಆರೋಪ ಮಾಡುತ್ತಾ ಬಂದಿದ್ದಾರೆ. ಪ್ರಕರಣದ ಬಗ್ಗೆ ಸಾಕ್ಷ್ಯ, ಆಧಾರ ಇಲ್ಲದೇ ಕಾಂಗ್ರೆಸ್ ಆರೋಪ ಮಾಡುತ್ತಿದೆ. ಕಾಂಗ್ರೆಸ್ ನವರು ಆಧಾರ ರಹಿತ ಆರೋಪಕ್ಕೆ ಜನ ಮನ್ನಣೆ ಕೊಡಲ್ಲ ಎಂದು ಅವರು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಯುವತಿಯನ್ನು ಇರಿದ ಮಾಜಿ ಲವ್ವರ್