Webdunia - Bharat's app for daily news and videos

Install App

ದೊಡ್ಡಬಳ್ಳಾಪುರದಲ್ಲಿ ಜನೋತ್ಸವ 2 ಲಕ್ಷ ಜನ ಸೇರುವ ಸಾಧ್ಯತೆ

Webdunia
ಬುಧವಾರ, 27 ಜುಲೈ 2022 (17:27 IST)
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರಕ್ಕೆ ಒಂದು ವರ್ಷ ಹಾಗೂ ಬಿಜೆಪಿ ಆಡಳಿತಕ್ಕೆ ಮೂರು ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಜುಲೈ 28) ದೊಡ್ಡಬಳ್ಳಾಪುರದಲ್ಲಿ ಬೃಹತ್‌ ಜನೋತ್ಸವ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಅವರು ತಿಳಿಸಿದರು.
 
ದೊಡ್ಡಬಳ್ಳಾಪುರದ ದೇವನಹಳ್ಳಿ ರಸ್ತೆಯ ರಘುನಾಥಪುರದ ಬಳಿ ಜನೋತ್ಸವ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯಲ್ಲಿ ಭಾಗಯಾಗಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕ್ರಿಯಾತ್ಮಕ ಆಡಳಿತದ ವಿಚಾರದಲ್ಲಿ ನೀತಿ ಆಯೋಗವು ಕರ್ನಾಟಕಕ್ಕೆ ಮೊದಲ ಸ್ಥಾನ ನೀಡಿದೆ. ಯೂನಿಕಾರ್ನ್ (ಸ್ಟಾರ್ಟಪ್) ವಿಚಾರದಲ್ಲೂ ಕರ್ನಾಟಕವು ಪ್ರಥಮ ಸ್ಥಾನದ ಹೆಗ್ಗಳಿಕೆಯನ್ನು ಹೊತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ 5 ಟ್ರಿಲಿಯನ್ ಇಕಾನಮಿ ಕನಸು- ಗುರಿ ಸಾಧನೆಗೆ ಕರ್ನಾಟಕದ ಕೊಡುಗೆ ದೊಡ್ಡಮಟ್ಟದಲ್ಲಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಮಧುಗಿರಿ ಭಾಗ, ಬೆಂಗಳೂರಿನ ಬ್ಯಾಟರಾಯನಪುರ, ದಾಸರಹಳ್ಳಿ, ಯಲಹಂಕ ವಿಧಾನಸಭಾ ಕ್ಷೇತ್ರಗಳ 1.5ರಿಂದ 2 ಲಕ್ಷ ಜನರು ಭಾಗವಹಿಸಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಸಂಪುಟದ ಎಲ್ಲ ಸದಸ್ಯರು ಭಾಗವಹಿಸಲಿದ್ದಾರೆ. ಜೊತೆಗೆ ಪಕ್ಷದ ಮಾರ್ಗದರ್ಶಕ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಪ್ರಭಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಪಾಲ್ಗೊಳ್ಳುವರು ಎಂದರು. ರಾಷ್ಟ್ರೀಯ ಅಧ್ಯಕ್ಷರಿಗೆ ವಿಶೇಷ ಸ್ವಾಗತ ಕೋರಲು ತಯಾರಿ ಮಾಡಿಕೊಂಡಿದ್ದೇವೆ ಎಂದು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments