Publish Date: Wed, 06 Sep 2017 (11:52 IST)
Updated Date: Wed, 06 Sep 2017 (12:10 IST)
ಪ್ರಗತಿಪರ ಚಿಂತಕಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕುರಿತಂತೆ ಸಂಭ್ರಮಿಸುವ ಕೆಟ್ಟ ಮನಸ್ಸುಗಳೂ ನಮ್ಮ ನಡುವೆ ಇವೆ. ಗೌರಿ ಲಂಕೇಶ್ ಹತ್ಯೆ ಬಗ್ಗೆ ಅಪಹಾಸ್ಯ ಮಾಡಿ ಫೇಸ್ಬುಕ್ ಪೋಸ್ಟ್ ಮಾಡಿದ್ದ ಚಿಕ್ಕಮಗಳೂರು ಮೂಲದ ಮಲ್ಲಿ ಅರ್ಜುನ್ ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನ ಲೈಕ್ ಮಾಡಿದ್ದ ಸಂದೀಪ್ ಎಂಬಾತನನ್ನೂ ವಶಕ್ಕೆ ಪಡೆಯಲಾಗಿದೆ.
ಫೇಸ್ಬುಕ್ ಪೋಸ್ಟ್ ಮೂಲಕ ಹತ್ಯೆಯನ್ನ ಅಪಹಾಸ್ಯ ಮಾಡಿರುವ ದುಷ್ಕರ್ಮಿಗಳು ಮತ್ತು ಹಂತಕರಿಗೂ ಏನಾದರೂ ಸಂಬಂಧವಿದೆಯಾ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಚಿಕ್ಕಮಗಳೂರಿಗೆ ತೆರಳಿರುವ ಬೆಂಗಳೂರು ಸಿಸಿಬಿ ಪೊಲೀಸರು, ಸ್ಥಳೀಯ ಪೊಲೀಸರ ನೆರವಿನೊಂದಿಗೆ ತನಿಖೆ ನಡೆಸುತ್ತಿದ್ದಾರೆ. ಅಪಹಾಸ್ಯದ ಫೇಸ್ಬುಕ್ ಪೋಸ್ಟ್`ಗೆ ಲೈಕ್ ಕೊಟ್ಟ ಎಲ್ಲರನ್ನೂ ವಿಚಾರಣೆಗೊಳಪಡಿಸಲಾಗುತ್ತಿದೆ.
ಈ ಮಧ್ಯೆ, ಎಲ್ಲ ವಿಧದಿಂದಲೂ ತನಿಖೆ ನಡೆಸುತ್ತಿರುವ ಪೊಲೀಸರು ಸಾಮಾಜಿಕ ಜಾಲತಾಣಗಳ ಪೋಸ್ಟ್, ಸಂದೇಶ, ಮೊಬೈಲ್ ಕರೆಗಳ ಮೇಲೆ ನಿಗಾ ಇಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ