ಗೌರಿ ಲಂಕೇಶ್ ಹತ್ಯೆ: ಫೇಸ್ಬುಕ್`ನಲ್ಲಿ ಅಪಹಾಸ್ಯ ಪೋಸ್ಟ್, ಲೈಕ್ ಮಾಡಿದ್ದವರು ಅರೆಸ್ಟ್..!

Webdunia
ಬುಧವಾರ, 6 ಸೆಪ್ಟಂಬರ್ 2017 (11:52 IST)
ಪ್ರಗತಿಪರ ಚಿಂತಕಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕುರಿತಂತೆ ಸಂಭ್ರಮಿಸುವ ಕೆಟ್ಟ ಮನಸ್ಸುಗಳೂ ನಮ್ಮ ನಡುವೆ ಇವೆ. ಗೌರಿ ಲಂಕೇಶ್ ಹತ್ಯೆ ಬಗ್ಗೆ ಅಪಹಾಸ್ಯ ಮಾಡಿ ಫೇಸ್ಬುಕ್ ಪೋಸ್ಟ್ ಮಾಡಿದ್ದ ಚಿಕ್ಕಮಗಳೂರು ಮೂಲದ ಮಲ್ಲಿ ಅರ್ಜುನ್ ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನ ಲೈಕ್ ಮಾಡಿದ್ದ ಸಂದೀಪ್ ಎಂಬಾತನನ್ನೂ ವಶಕ್ಕೆ ಪಡೆಯಲಾಗಿದೆ.

ಫೇಸ್ಬುಕ್ ಪೋಸ್ಟ್ ಮೂಲಕ ಹತ್ಯೆಯನ್ನ ಅಪಹಾಸ್ಯ ಮಾಡಿರುವ ದುಷ್ಕರ್ಮಿಗಳು ಮತ್ತು ಹಂತಕರಿಗೂ ಏನಾದರೂ ಸಂಬಂಧವಿದೆಯಾ ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಚಿಕ್ಕಮಗಳೂರಿಗೆ ತೆರಳಿರುವ ಬೆಂಗಳೂರು ಸಿಸಿಬಿ ಪೊಲೀಸರು, ಸ್ಥಳೀಯ ಪೊಲೀಸರ ನೆರವಿನೊಂದಿಗೆ ತನಿಖೆ ನಡೆಸುತ್ತಿದ್ದಾರೆ. ಅಪಹಾಸ್ಯದ ಫೇಸ್ಬುಕ್ ಪೋಸ್ಟ್`ಗೆ ಲೈಕ್ ಕೊಟ್ಟ ಎಲ್ಲರನ್ನೂ ವಿಚಾರಣೆಗೊಳಪಡಿಸಲಾಗುತ್ತಿದೆ.

ಈ ಮಧ್ಯೆ, ಎಲ್ಲ ವಿಧದಿಂದಲೂ ತನಿಖೆ ನಡೆಸುತ್ತಿರುವ ಪೊಲೀಸರು ಸಾಮಾಜಿಕ ಜಾಲತಾಣಗಳ ಪೋಸ್ಟ್, ಸಂದೇಶ, ಮೊಬೈಲ್ ಕರೆಗಳ ಮೇಲೆ ನಿಗಾ ಇಟ್ಟಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments