Select Your Language

Notifications

webdunia
webdunia
webdunia
webdunia

ಮಹಾ ಮಳೆಗೆ 20 ಮಂದಿ ಸಾವು, 40ಕ್ಕೂ ಹೆಚ್ಚು ಜಾನುವಾರುಗಳು ಬಲಿ!

ಮಹಾ ಮಳೆಗೆ 20 ಮಂದಿ ಸಾವು, 40ಕ್ಕೂ ಹೆಚ್ಚು ಜಾನುವಾರುಗಳು ಬಲಿ!
ಕಾರವಾರ , ಭಾನುವಾರ, 9 ಜುಲೈ 2023 (08:34 IST)
ಕಾರವಾರ : ರಾಜ್ಯದಲ್ಲಿ ಇದುವರೆಗೆ ಮಳೆಗೆ 20 ಜನರು ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ
 
ಹೇಳಿದ್ದಾರೆ. ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮಂಗಳೂರು, ಉಡುಪಿ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಬೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮಳೆ ಹಾನಿಗೆ ಸರ್ಕಾರ ಪರಿಹಾರ ಕೊಡಲು ಸಿದ್ದವಿದ್ದು, ಹಾನಿಯಾದ ಮನೆಗಳಿಗೆ 1.25 ಲಕ್ಷ ಪರಿಹಾರ ನೀಡಲಾಗುತ್ತಿದೆ ಎಂದರು.

ನೆರೆ ಪಿಡೀತ ಪ್ರದೇಶಗಳಿಗೆ ಬೇಟಿನೀಡಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ ಅವರು, ಅಧಿಕಾರಿಗಳ ವರ್ಗಕ್ಕೆ ಚುರುಕು ಮುಡಿಸಲು ಬೇಟಿ ನೀಡುತ್ತಿದ್ದೆವೆ. ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ. ಜುಲೈ ಕೊನೆ ವಾರದವರೆಗೆ ಕಾದುನೋಡಿ ಮೋಡ ಬಿತ್ತನೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇವೆ. ಕೇಂದ್ರದ ನಿಯಮಗಳ ಅನ್ವಯ ಮೋಡ ಬಿತ್ತನೆ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದರು.

ಸುರಿದ ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಸಾವನ್ನಪ್ಪಿದ ಪ್ರಕರಣ ಸಂಬಂಧ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿದ ಕೃಷ್ಣಭೈರೇಗೌಡ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪಶ್ಚಿಮ ಬಂಗಾಳ : ಭುಗಿಲೆದ್ದ ಹಿಂಸಾಚಾರಕ್ಕೆ 11 ಮಂದಿ ಬಲಿ!