Webdunia - Bharat's app for daily news and videos

Install App

ಅನ್ನಭಾಗ್ಯಕ್ಕೆ ಕನ್ನ: 20 ಕ್ವಿಂಟಲ್ ಅಕ್ಕಿ ವಶ

Webdunia
ಶುಕ್ರವಾರ, 8 ಫೆಬ್ರವರಿ 2019 (19:17 IST)
ಅನ್ನ ಭಾಗ್ಯಕ್ಕೆ ಸೇರಿದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

ಅಕ್ರಮವಾಗಿ ಅನ್ನಭಾಗ್ಯಕ್ಕೆ ಸೇರಿದ್ದ ಅಕ್ಕಿಯನ್ನು ಬೂಲೆರೋ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ. ವಾಹನ ಸಮೇತ 20 ಕ್ವಿಂಟಲ್ ಅಕ್ಕಿ ವಶಪಡಿಸಿಕೊಂಡಿರುವ ಘಟನೆ ಮಾನ್ವಿ ತಾಲೂಕಿನ ಕುರ್ಡಿ ಕ್ರಾಸ್ ಬಳಿ ಜರುಗಿದೆ.

ಅನ್ನಭಾಗ್ಯಕ್ಕೆ ಸೇರಿದ್ದ ಅಕ್ಕಿಯನ್ನು ರಾಯಚೂರಿಗೆ ಸಾಗಿಸಲಾಗುತ್ತಿತ್ತು ಎನ್ನುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ಹಾಗೂ ಆಹಾರ ನಿರೀಕ್ಷಕರು ಜಂಟಿ ದಾಳಿ ಮಾಡಿದ್ದಾರೆ. ದಾಳಿ ವೇಳೆ ಅಕ್ಕಿ ವಶ ಪಡಿಸಿಕೊಂಡಿದ್ದಾರೆ. ಮಾನ್ವಿಯ ಮುರಳಿ ಹಾಗೂ ಬಾಬು ಎಂಬುವವರು ಬೂಲೆರೋ ವಾಹನದಲ್ಲಿ ಅಕ್ಕಿ ಸಾಗಿಸುತ್ತಿದ್ದಾರೆಂದು ತಿಳಿದುಬಂದಿದೆ. ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments