Select Your Language

Notifications

webdunia
webdunia
webdunia
webdunia

ಚುನಾವಣೆ ಚಾಣಕ್ಯ ಪ್ರಶಾಂತ್ ಕಿಶೋರ್‌ಗೆ ರಾಜ್ಯದ ಹೊಣೆ

ಚುನಾವಣೆ ಚಾಣಕ್ಯ ಪ್ರಶಾಂತ್ ಕಿಶೋರ್‌ಗೆ ರಾಜ್ಯದ ಹೊಣೆ
ಬೆಂಗಳೂರು , ಮಂಗಳವಾರ, 28 ಫೆಬ್ರವರಿ 2017 (20:33 IST)
ಗುಜರಾತ್‌ನಲ್ಲಿ ಪ್ರಧಾನಿ ಮೋದಿ, ಬಿಹಾರ್‌ ಚುನಾವಣೆಯಲ್ಲಿ ನಿತೀಶ್ ಕುಮಾರ್ ಅವರ ಪಕ್ಷವನ್ನು ಗೆಲ್ಲಿಸಿ ಅಧಿಕಾರ ಹಿಡಿಯುವಂತೆ ಮಾಡಿದ್ದ ಚುನಾವಣೆ ಚಾಣಕ್ಯ ಪ್ರಶಾಂತ್ ಕಿಶೋರ್‌ಗೆ, ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ಹೊರೆ ನೀಡಲು ಕಾಂಗ್ರೆಸ್ ಹೈಕಮಾಂಡ್ ರಣತಂತ್ರ ರೂಪಿಸಿದೆ. 
 ಪ್ರಶಾಂತ್ ಕಿಶೋರ್ ಜೊತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಚರ್ಚೆ ನಡೆಸಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರವಹಿಸಲಿದ್ದಾರೆ. ಕಿಶೋರ್‌ಗೆ ಸಿಎಂ ಸಿದ್ದರಾಮಯ್ಯ ಸಾಥ್ ನೀಡಲಿದ್ದಾರೆ ಎಂದು ಹೈಕಮಾಂಡ್‌ನ ಆಪ್ತ ಮೂಲಗಳು ತಿಳಿಸಿವೆ.
 
ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳಿಗೆ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಶಾಂತ್ ಕಿಶೋರ್, ಒಂದು ವೇಳೆ, ಉತ್ತರಪ್ರದೇಶದಲ್ಲಿ ಯಶಸ್ವಿಯಾದಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದ ಹೊಣೆಯನ್ನು ಹೊರಲಿದ್ದಾರೆ.
 
ಗುಜರಾತ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಂದಿನ ಮುಖ್ಯಮಂತ್ರಿ ನರೇಂದ್ರ ಮೋದಿಯವರನ್ನು ಬೆಂಬಲಿಸಿ ಚುನಾವಣೆಯಲ್ಲಿ ಬಿಜೆಪಿ ಜಯಬೇರಿ ಬಾರಿಸುವಲ್ಲಿ ಮಹತ್ತರ ಪಾತ್ರವಹಿಸಿದ್ದನ್ನು ಸ್ಮರಿಸಬಹುದು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪರನ್ನು ಖೆಡ್ಡಾಗೆ ಕೆಡುವಲು ಕಾಂಗ್ರೆಸ್ ರಣತಂತ್ರ