Select Your Language

Notifications

webdunia
webdunia
webdunia
webdunia

ಬಿಜೆಪಿ ಸರ್ಕಾರದಲ್ಲಿ 21 ಹಗರಣ: ಸದನದಲ್ಲಿ ಹೊಸ ದಾಳ ಉರುಳಿಸಿದ ಸಿದ್ದರಾಮಯ್ಯ

ಬಿಜೆಪಿ ಸರ್ಕಾರದಲ್ಲಿ 21 ಹಗರಣ: ಸದನದಲ್ಲಿ ಹೊಸ ದಾಳ ಉರುಳಿಸಿದ ಸಿದ್ದರಾಮಯ್ಯ

Sampriya

ಬೆಂಗಳೂರು , ಶುಕ್ರವಾರ, 19 ಜುಲೈ 2024 (17:03 IST)
ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣಗಳು ತುಂಬಾ ಜೋರಾಗಿಯೇ ಸದ್ದು ಮಾಡುತ್ತಿದೆ. ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷದ ನಾಯಕರು ಸದನದ ಬಾವಿಗಿಳಿದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.

ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು  ಬಿಜೆಪಿ ಸರ್ಕಾರದ ಅವಧಿಯಲ್ಲಿ 21 ಹಗರಣಗಳು ನಡೆದಿವೆ ಎಂದು  ಪಟ್ಟಿಯನ್ನು ಬಿಡುಗಡೆ ಮಾಡಿದರು. ವಿಪಕ್ಷಗಳ ಗದ್ದಲದ ನಡುವೆಯೂ ಸಿಎಂ ಸಿದ್ದರಾಮಯ್ಯ ಅವರು ಹಗರಣಗಳ ಪಟ್ಟಿಯನ್ನು ಓದಿದರು. ಇನ್ನೂ ಈ ಹಗರಣದಲ್ಲಿ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಆರ್‌. ಅಶೋಕ್‌ ಸೇರಿದಂತೆ ಅನೇಕ ಬಿಜೆಪಿ ನಾಯಕರ ಹೆಸರುಗಳನ್ನು ಒತ್ತಿ ಹೇಳಿದರು.

ಇನ್ನೂ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ತಮ್ಮ ಹಗರಣಗಳನ್ನು ಮುಚ್ಚಿ ಹಾಕಲು ಬಿಜೆಪಿಯವರು ಇದೀಗ ಕಾಂಗ್ರೆಸ್‌ ನಾಯಕರ ಮೇಲೆ ಬೊಟ್ಟು ಮಾಡುತ್ತಿದ್ದಾರೆ.  ನನ್ನ ರಾಜಕೀಯ ಜೀವನದಲ್ಲೇ ಇಷ್ಟು ಕೆಟ್ಟದಾಗಿ ಪ್ರತಿಪಕ್ಷಗಳು ನಡೆದುಕೊಂಡಿಲ್ಲ.

ಬಿಜೆಪಿ ಅವಧಿಯಲ್ಲಿ ಲೆಕ್ಕ ಹಾಕಲಾಗದಷ್ಟು ಹಗರಣಗಳು ಬಯಲಾಗುತ್ತಲೇ ಇವೆ. ಈ ಹಗರಣಗಳ ಕುರಿತು ವಿವಿಧ ತನಿಖೆ ನಡೆಯುತ್ತಿವೆ. ಭ್ರಷ್ಟರು ಹಾಗೂ ದುರುಳರು ಜೈಲಿಗೆ ಹೋಗುವ ದಿನಗಳ ದೂರವಿಲ್ಲ ಎಂದು ಅವರು ಗುಡುಗಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು-ಮಂಗಳೂರು ಸಂಚಾರ ಸಂಕಟಕ್ಕೆ ಒಂದೇ ಗಂಟೆಯಲ್ಲಿ ಪರಿಹಾರ ನೀಡಿದ ರೈಲ್ವೇ ಇಲಾಖೆ