Publish Date: Sat, 13 Nov 2021 (21:57 IST)Updated Date: Sat, 13 Nov 2021 (22:00 IST)
ರಾಜ್ಯದಲ್ಲಿ ಇಂದು 227 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅಲ್ಲದೇ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.ಸೋಂಕಿತರ ಸಂಖ್ಯೆ 29,91,369ಕ್ಕೆ ಏರಿಕೆಯಾಗಿದೆ.
ಅಲ್ಲದೇ ರಾಜ್ಯದಲ್ಲಿ ಇಂದು 206 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಒಟ್ಟಾರೆ 29,45,164 ಮಂದಿ ಗುಣಮುಖರಾಗಿದ್ದಾರೆ.ಶುಕ್ರವಾರ ಇಬ್ಬರು ಸೋಂಕಿತರು ಮೃತರಾಗಿದ್ದಾರೆ. ಸಾವಿನ ಸಂಖ್ಯೆ 38,140ಕ್ಕೆ ಏರಿಕೆ ಆಗಿದೆ. ಸದ್ಯ 8,036 ಸಕ್ರಿಯ ಪ್ರಕರಣಗಳಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.22% ರಷ್ಟಿದ್ದರೆ, ಸಾವಿನ ಪ್ರಮಾಣ 0.88% ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.