Select Your Language

Notifications

webdunia
webdunia
webdunia
webdunia

ಸಿಎಂ ಅಧಿಕಾರ ಬಿಜೆಪಿಗೆ ಬಿಟ್ಟುಕೊಟ್ಟರೆ ಪ್ರಜ್ವಲ್ ವಿರುದ್ಧ 24 ಗಂಟೆಗಳ ಕ್ರಮ: ಆರ್.ಅಶೋಕ್

ಸಿಎಂ ಅಧಿಕಾರ ಬಿಜೆಪಿಗೆ ಬಿಟ್ಟುಕೊಟ್ಟರೆ ಪ್ರಜ್ವಲ್ ವಿರುದ್ಧ 24 ಗಂಟೆಗಳ ಕ್ರಮ: ಆರ್.ಅಶೋಕ್

Sampriya

ಬೆಂಗಳೂರು , ಬುಧವಾರ, 1 ಮೇ 2024 (18:06 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರವನ್ನು ಬಿಜೆಪಿಗೆ ಬಿಟ್ಟುಕೊಟ್ಟರೆ ಪ್ರಜ್ವಲ್ ವಿರುದ್ಧ  24 ಗಂಟೆಗಳಲ್ಲಿ ಕ್ರಮ ಕೈಗೊಳ್ಳುತ್ತೇವೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಹೇಳಿದರು.

ಯಾವುದೇ ಕಾರಣಕ್ಕು ಪ್ರಜ್ವಲ್‌ ಪ್ರಕರಣವನ್ನು ಬಿಜೆಪಿ ಪಕ್ಷ ಬೆಂಬಲಿಸುವುದಿಲ್ಲ ಎಂದ ಅವರು,  ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಬಿಂಬಿಸಿಕೊಂಡು 2019ರ ಚುನಾವಣೆಯಲ್ಲಿ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್‌ ಉತ್ತರ ನೀಡಬೇಕು ಎಂದರು.

ಇನ್ನು ಪ್ರಜ್ವಲ್ ವಿದೇಶಕ್ಕೆ ತೆರಳಿದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ವಿದೇಶಕ್ಕೆ ಪ್ರಜ್ವಲ್ ಹೋಗುವಾಗ ಕರ್ನಾಟಕ ಪೊಲೀಸರು, ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು? ಕಾಂಗ್ರೆಸ್‌ ಸರ್ಕಾರ ಗುಪ್ತಚರ ದಳ ವಿಫಲವಾಗಿದೆ. ಇದೀಗ ತಮ್ಮ ವೈಫಲ್ಯವನ್ನು ಮರೆಮಾಚಲು ಪ್ರಧಾನಿಯನ್ನು ಪ್ರಶ್ನೆ ಮಾಡುತ್ತಿದ್ದಾರೆ.

ಇನ್ನೂ ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿಗೆ ಪತ್ರ ಬರೆದು ಸದ್ಯ ವಿದೇಶದಲ್ಲಿರುವ ಪ್ರಜ್ವಲ್‌ರನ್ನು ಸ್ವದೇಶಕ್ಕೆ ಕರೆತರಲು ನೆರವಾಗುವಂತೆ ಕೇಳಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಲ್ಮಾನ್ ಖಾನ್ ಮನೆ ಗುಂಡಿನ ದಾಳಿ ಪ್ರಕರಣದ ಆರೋಪಿ ಆತ್ಮಹತ್ಯೆಗೆ ಶರಣು