Publish Date: Mon, 25 Jul 2022 (20:12 IST)
Updated Date: Mon, 25 Jul 2022 (20:14 IST)
ಹಾಸನದಲ್ಲಿ ಕಲುಷಿತ ಆಹಾರ ಸೇವಿಸಿ 25 ವಿದ್ಯಾರ್ಥಿನಿಯರು ಅಸ್ವಸ್ಥರಾದಂತಹ ಘಟನೆ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ಜಿಲ್ಲೆಯ ಆಲೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಿನ್ನೆ ರಾತ್ರಿ ಊಟ ಸೇವಿಸಿದ ಮಕ್ಕಳಲ್ಲಿ ವಾಂತಿ, ಬೇಧಿ ಹಿನ್ನೆಲೆ ಆಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಿಲಾಗಿದ್ದು, ಚಿಕಿತ್ಸೆ ನಂತರ ಹಾಸನ ಜಿಲ್ಲಾಸ್ಪತ್ರೆಗೆ ಮಕ್ಕಳನ್ನು ಸ್ಥಳಾಂತರ ಮಾಡಲಾಯಿತು. ಹಾಸನ ಎಸ್ಪಿ ಹರಿರಾಂ ಶಂಕರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಕ್ಕಳ ಆರೋಗ್ಯ ವಿಚಾರಿಸಿದರು.