2500 ಕೋಟಿ ಕೊಟ್ಟರೆ ಸಿಎಂ ಮಾಡ್ತಾರಂತೆ: ಬಸನಗೌಡ ಪಾಟೀಲ್‌ ಯತ್ನಾಳ್‌ ಬಾಂಬ್‌

Webdunia
ಶುಕ್ರವಾರ, 6 ಮೇ 2022 (14:08 IST)
ದಿನಕ್ಕೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ ಬಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಇದೀಗ ಬಿಜೆಪಿ ಹೈಕಮಾಂಡ್‌ ವಿರುದ್ಧವೇ ದೊಡ್ಡ ಬಾಂಬ್‌ ಹಾಕಿದ್ದಾರೆ.
ವಿಜಯಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ನನ್ನ ಬಳಿ ಬಂದು 2500 ಕೋಟಿ ರೂ. ಕೊಟ್ಟರೆ ಸಿಎಂ ಮಾಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಅದಕ್ಕೆ ನಾನು ಒಪ್ಪಲಿಲ್ಲ ಎಂದು ಹೇಳಿದ್ದಾರೆ.
೨೫೦೦ ಕೋಟಿ ಕೊಡಬೇಕಂತೆ? ಹೇಗೆ ಕೊಡಲಿ ನಾನು ಅಷ್ಟೊಂದು ದುಡ್ಡು? ಗೋದಾಮಿನಲ್ಲಿ ಇಡಬೇಕಾ ಅಥವಾ ಎಲ್ಲಿ ಇಡಬೇಕು ಅಂತ ಅವರಲ್ಲಿ ಪ್ರಶ್ನಿಸಿದೆ ಎಂದು ಅವರು ಹೇಳಿದರು.
ನಾನು ವಾಜಪೇಯಿ ಕಾಲದಲ್ಲಿ ಕೇಂದ್ರ ಸಚಿವ ಆಗಿದ್ದವನು. ನಾನು ಹಣ ಕೊಟ್ಟು ಅಥವಾ ಶಿಫಾರಸು ಮಾಡಿ ಸಿಎಂ ಆಗಬೇಕಾಗಿಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಹೈಕಮಾಂಡ್‌ ವಿರುದ್ಧ ಗುಡುಗಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯ್ಯೋ ಪಾಪ ಎಂದು ಟರ್ಕಿಗೆ ಸಹಾಯ ಮಾಡಿತ್ತು ಭಾರತ: ಆದರೆ ಈಗ ಟರ್ಕಿ ಮಾಡುತ್ತಿರೋದು ಏನು

Karnataka Weather: ಈ ಜಿಲ್ಲೆಗೆ ಮಾತ್ರ ಇಂದು ಮಳೆಯ ಸೂಚನೆ

Bihar election result 2025: ಬಿಹಾರದಲ್ಲಿ ಯಾರಿಗೆ ಆರಂಭಿಕ ಮುನ್ನಡೆ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ಮುಂದಿನ ಸುದ್ದಿ
Show comments