Select Your Language

Notifications

webdunia
webdunia
webdunia
webdunia

ಇ-ವಿಧಾನ ಯೋಜನೆ ಹೆಸರಲ್ಲಿ 254 ಕೋಟಿ ರೂ. ಹಗರಣ: ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆರೋಪ

ಇ-ವಿಧಾನ ಯೋಜನೆ ಹೆಸರಲ್ಲಿ 254 ಕೋಟಿ ರೂ. ಹಗರಣ: ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಆರೋಪ
bengaluru , ಗುರುವಾರ, 23 ಜೂನ್ 2022 (16:33 IST)
ರಾಜ್ಯ ವಿಧಾನಮಂಡಲದಲ್ಲಿ ಕಾಗದ ರಹಿತ ಆಡಳಿತ ವ್ಯವಸ್ಥೆ ತರುವ ಉದ್ದೇಶದ ಇ-ವಿಧಾನ್ ಯೋಜನೆ ಹೆಸರಲ್ಲಿ ಅಧಿಕಾರಿಗಳು 254 ಕೋಟಿ ರೂ. ಹಗರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ  ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಬಾಬು ಅವರು ಈ ವಿಚಾರವನ್ನು ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ಕಾನೂನು ವಿಭಾಗದ ಉಪಾಧ್ಯಕ್ಷರಾದ ದಿವಾಕರ್, ಮಾಧ್ಯಮ ವಿಭಾಗದ ಸಂಯೋಜಕರಾದ ರಾಮಚಂದ್ರಪ್ಪ, ಜಿ.ಸಿ ರಾಜುಗೌಡ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಮೇಶ್ ಬಾಬು ಅವರು ಪ್ರಸ್ತಾಪಿಸಿದ ವಿಚಾರ ಹೀಗಿತ್ತು...
‘ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳ ಮಟ್ಟದಲ್ಲಿ 254 ಕೋಟಿ ಮೊತ್ತದ ಹಗರಣ ಮಾಡಲು ಮುಂದಾಗಿದ್ದು, ಈ ಕುರಿತು ಮೇ 5 ಹಾಗೂ 7 ರಂದು ವಿಧಾನಸಭೆ ಸ್ಪೀಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದೆ. ನಂತರ ಸ್ಪೀಕರ್ ಅರನ್ನು ಭೇಟಿ ಮಾಡಿಯೂ ಈ ವಿಚಾರವಾಗಿ ಮನವಿ ಮಾಡಿದ್ದೆ.
ಸ್ಪೀಕರ್ ಆದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆಯ ಮುಖ್ಯಸ್ಥರಾಗಿ ಸದನದ ಹಣವನ್ನು ಕಾಪಾಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಸಾರ್ವಜನಿಕರ ವಿರೋಧದ ನಡುವೆಯೂ ಅಧಇಕಾರಿಗಳು ವಿಧಾನಸಭೆಯ ಸಚಿವಾಲಯಗಳಲ್ಲಿ ಕಾಗದ ರಹಿತ ವ್ಯವಸ್ಥೆಯನ್ನು ತರುವ ಜವಾಬ್ದಾರಿಯನ್ನು ಕಿಯೋನಿಕ್ಸ್ ಎಂಬ ಖಾಸಗಿ ಕಂಪನಿಗೆ ನೀಡುವ ಮೂಲಕ ತಮ್ಮ ಜೇಬು ತುಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.
2017-18ರಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಆಯವ್ಯಯದಲ್ಲಿ ಕರ್ನಾಟಕ ವಿಧಾನಮಂಡಲದಲ್ಲಿ ನಗದು ರಹಿತ ಯೋಜನೆಯ ಇ-ವಿಧಾನ ಕಾರ್ಯಕ್ರಮ ಜಾರಿಗೊಳಿಸಲು ಪ್ರಾಥಮಿಕವಾಗಿ ಮೂಲಭೂತ ಸೌಕರ್ಯಗಳಿಗೆ 20 ಕೋಟಿ ರೂಪಾಯಿಗಳ ಬಿಡುಗಡೆ ಮತ್ತು ಈ ಯೋಜನೆಗೆ 250 ಕೋಟಿಗಳ ಅನುದಾನ ಘೋಷಣೆ ಮಾಡಿತ್ತು.
ನಂತರ ಕೇಂದ್ರ ಸರ್ಕಾರ ಒಂದು ರಾಷ್ಟ್ರ ಒಂದು ವಿಧ ಎಂಬ ಉದ್ದೇಶದಿಂದ ಎಲ್ಲ ಕಡೆ ಒಂದೇ ರೀತಿಯ ಆಡಳಿತಾತ್ಮಕ ವ್ಯವಸ್ಥೆ ಜಾರಿಗೆ ಅಂದರೆ ಸಂಸದೀಯ ವ್ಯವಹಾರಗಳ ಸಚಿವಾಲಯದ ಮೂಲಕ ಮೇವಾ ಎಂಬ ಯೋಜನೆ ಘೋಷಿಸಿದ್ದರು. ಯಾವ ರಾಜ್ಯಗಳ ಕಾಗದ ರಹಿತ ವ್ಯವಸ್ಥೆ ಜಾರಿಗೆ ಮುಂದೆಬರುತ್ತವೋ ಆ ರಾಜ್ಯಗಳಿಗೆ 60:40 ಅನುದಾನದ ನೀಡಲು ತೀರ್ಮಾನಿಸಲಾಗಿತ್ತು. ಅದಕ್ಕೆ ಅನುಗುಣವಾಗಿ 2018ರಲ್ಲಿ ಆಗಿನ ಮುಖ್ಯಕಾರ್ಯದರ್ಶಿಗಳು ವಿಜಯ್ ಭಾಸ್ಕರ್ ಅವರು ಕೇಂದ್ರಕ್ಕೆ ಪತ್ರ ಬರೆದು ಈ ಯೋಜನೆ ಜಾರಿಗೆ ಆಸಕ್ತಿ ಇದ್ದು ಇದರ ಡಿಪಿಆರ್ ಕಳುಹಿಸಿ, ಕೇಂದ್ರದ ಶೇ.60ರಷ್ಟು ಅನುದಾನ ಬಳಸಿಕೊಳ್ಳುವುದಾಗಿ ತಿಳಿಸಲಾಗುತ್ತದೆ. ನಂತರ ರಾಜ್ಯ ಸರ್ಕಾರಕ್ಕೆ ಕೇಂದ್ರ ಪತ್ರ ಬರೆದು ಈ ಯೋಜನೆಯ ಕಾರ್ಯಾಗಾರ ಏರ್ಪಡಿಸಲಾಗಿದ್ದು, ನಿಮ್ಮ ಸಚಿವಾಲಯದ ಅಧಿಕಾರಿಗಳನ್ನು ಕಳುಹಿಸಿಕೊಡಿ ಎಂದು ತಿಳಿಸಲಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ಗ್ರೇಸ್ ಅಂಡ್ ಗ್ಲೋ ಸೆಂಟರ್ ಆರಂಭ