Webdunia - Bharat's app for daily news and videos

Install App

ಕಾಗದ ರಹಿತ ಆಡಳಿತ ಇ-ವಿಧಾನ ಯೋಜನೆ ಹೆಸರಲ್ಲಿ 254 ಕೋಟಿ ರೂ. ಹಗರಣ

Webdunia
ಗುರುವಾರ, 23 ಜೂನ್ 2022 (19:55 IST)
ರಾಜ್ಯ ವಿಧಾನಮಂಡಲದಲ್ಲಿ ಕಾಗದ ರಹಿತ ಆಡಳಿತ ವ್ಯವಸ್ಥೆ ತರುವ ಉದ್ದೇಶದ ಇ-ವಿಧಾನ್ ಯೋಜನೆ ಹೆಸರಲ್ಲಿ ಅಧಿಕಾರಿಗಳು 254 ಕೋಟಿ ರೂಪಾಯಿ ಹಗರಣ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಆರೋಪಿಸಿದ್ದಾರೆ.
 
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಬಾಬು ಅವರು ಈ ವಿಚಾರವನ್ನು ಪ್ರಸ್ತಾಪಿಸಿದರು. ಈ ಸಂದರ್ಭದಲ್ಲಿ ಕಾನೂನು ವಿಭಾಗದ ಉಪಾಧ್ಯಕ್ಷರಾದ ದಿವಾಕರ್, ಮಾಧ್ಯಮ ವಿಭಾಗದ ಸಂಯೋಜಕರಾದ ರಾಮಚಂದ್ರಪ್ಪ, ಜಿ.ಸಿ ರಾಜುಗೌಡ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಮೇಶ್ ಬಾಬು ಅವರು ಪ್ರಸ್ತಾಪಿಸಿದ ವಿಚಾರ ಹೀಗಿತ್ತು... 
 
‘ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳ ಮಟ್ಟದಲ್ಲಿ 254 ಕೋಟಿ ಮೊತ್ತದ ಹಗರಣ ಮಾಡಲು ಮುಂದಾಗಿದ್ದು, ಈ ಕುರಿತು ಮೇ 5 ಹಾಗೂ 7 ರಂದು ವಿಧಾನಸಭೆ ಸ್ಪೀಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದೆ. ನಂತರ ಸ್ಪೀಕರ್ ಅರನ್ನು ಭೇಟಿ ಮಾಡಿಯೂ ಈ ವಿಚಾರವಾಗಿ ಮನವಿ ಮಾಡಿದ್ದೆ.
 
ಸ್ಪೀಕರ್ ಆದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆಯ ಮುಖ್ಯಸ್ಥರಾಗಿ ಸದನದ ಹಣವನ್ನು ಕಾಪಾಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಸಾರ್ವಜನಿಕರ ವಿರೋಧದ ನಡುವೆಯೂ ಅಧಇಕಾರಿಗಳು ವಿಧಾನಸಭೆಯ ಸಚಿವಾಲಯಗಳಲ್ಲಿ ಕಾಗದ ರಹಿತ ವ್ಯವಸ್ಥೆಯನ್ನು ತರುವ ಜವಾಬ್ದಾರಿಯನ್ನು ಕಿಯೋನಿಕ್ಸ್ ಎಂಬ ಖಾಸಗಿ ಕಂಪನಿಗೆ ನೀಡುವ ಮೂಲಕ ತಮ್ಮ ಜೇಬು ತುಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.
 
2017-18ರಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಆಯವ್ಯಯದಲ್ಲಿ ಕರ್ನಾಟಕ ವಿಧಾನಮಂಡಲದಲ್ಲಿ ನಗದು ರಹಿತ ಯೋಜನೆಯ ಇ-ವಿಧಾನ ಕಾರ್ಯಕ್ರಮ ಜಾರಿಗೊಳಿಸಲು ಪ್ರಾಥಮಿಕವಾಗಿ ಮೂಲಭೂತ ಸೌಕರ್ಯಗಳಿಗೆ 20 ಕೋಟಿ ರೂಪಾಯಿಗಳ ಬಿಡುಗಡೆ ಮತ್ತು ಈ ಯೋಜನೆಗೆ 250 ಕೋಟಿಗಳ ಅನುದಾನ ಘೋಷಣೆ ಮಾಡಿತ್ತು.
 
ನಂತರ ಕೇಂದ್ರ ಸರ್ಕಾರ ಒಂದು ರಾಷ್ಟ್ರ ಒಂದು ವಿಧ ಎಂಬ ಉದ್ದೇಶದಿಂದ ಎಲ್ಲ ಕಡೆ ಒಂದೇ ರೀತಿಯ ಆಡಳಿತಾತ್ಮಕ ವ್ಯವಸ್ಥೆ ಜಾರಿಗೆ ಅಂದರೆ ಸಂಸದೀಯ ವ್ಯವಹಾರಗಳ ಸಚಿವಾಲಯದ ಮೂಲಕ ಮೇವಾ ಎಂಬ ಯೋಜನೆ ಘೋಷಿಸಿದ್ದರು. ಯಾವ ರಾಜ್ಯಗಳ ಕಾಗದ ರಹಿತ ವ್ಯವಸ್ಥೆ ಜಾರಿಗೆ ಮುಂದೆಬರುತ್ತವೋ ಆ ರಾಜ್ಯಗಳಿಗೆ 60:40 ಅನುದಾನದ ನೀಡಲು ತೀರ್ಮಾನಿಸಲಾಗಿತ್ತು. ಅದಕ್ಕೆ ಅನುಗುಣವಾಗಿ 2018ರಲ್ಲಿ ಆಗಿನ ಮುಖ್ಯಕಾರ್ಯದರ್ಶಿಗಳು ವಿಜಯ್ ಭಾಸ್ಕರ್ ಅವರು ಕೇಂದ್ರಕ್ಕೆ ಪತ್ರ ಬರೆದು ಈ ಯೋಜನೆ ಜಾರಿಗೆ ಆಸಕ್ತಿ ಇದ್ದು ಇದರ ಡಿಪಿಆರ್ ಕಳುಹಿಸಿ, ಕೇಂದ್ರದ ಶೇ.60ರಷ್ಟು ಅನುದಾನ ಬಳಸಿಕೊಳ್ಳುವುದಾಗಿ ತಿಳಿಸಲಾಗುತ್ತದೆ. ನಂತರ ರಾಜ್ಯ ಸರ್ಕಾರಕ್ಕೆ ಕೇಂದ್ರ ಪತ್ರ ಬರೆದು ಈ ಯೋಜನೆಯ ಕಾರ್ಯಾಗಾರ ಏರ್ಪಡಿಸಲಾಗಿದ್ದು, ನಿಮ್ಮ ಸಚಿವಾಲಯದ ಅಧಿಕಾರಿಗಳನ್ನು ಕಳುಹಿಸಿಕೊಡಿ ಎಂದು ತಿಳಿಸಲಾಗುತ್ತದೆ.
 
ಇದಕ್ಕೆ ಅನುಗಣವಾಗಿ ಉಭಯ ಸದನಗಳ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಗಿಸುತ್ತಾರೆ. ನಂತರ ಹಲವು ವಿಚಾರ ಸಂಕೀರಣ ನಡೆದಿದ್ದು, ಕಾಗೇರಿ ಅವರು ಇದರಲ್ಲಿ ಭಾಗಿಯಾಗಿದ್ದಾರೆ. ಆಗ ಪರಿಷತ್ ಸಭಾಧ್ಯಕ್ಷರಾಗಿದ್ದ ಹೊರಟ್ಟಿ ಅವರು ಭಾಗವಹಿಸಿದ್ದರು. ಈ ಸಮ್ಮೇಳನದ ನಂತರ ಸ್ಪೀಕರ್ ಅವರು ಮುಖ್ಯಕಾರ್ಯದರ್ಶಿಗಳ ನೇತೃತ್ವದಲ್ಲಿ ಮೇವಾ ಯೋಜನೆ ಜಾರಿ ಹಾಗೂ ಅದರ ನಿರ್ವಹಣೆ ಮಾಡಲು ಉನ್ನತ ಮಟ್ಟದ ಸಮಿತಿ ಮಾಡಿತ್ತು.  
 
 08-05-2018ರಲ್ಲಿ ವಿಧಾನಮಂಡಲದ ಸಚಿವಾಲಯದ ಅಧಿಕಾರಿಗಳು ಹಿಮಾಚಲ ಪ್ರದೇಶದ ವಿಧಾನಸಭಾ ಸಚಿವಾಲಯಕ್ಕೆ ಭೇಟಿ ನೀಡಿ ಅಲ್ಲಿನ ಕಾಗದ ರಹಿತ ಆಡಳಿತದ ಅಧ್ಯಯನ ಮಾಡಿ, ಯೋಜನೆ ಮತ್ತು ಇದರ ತಂಡಜ್ಞಾನ ಸಂಬಂಧ ಸಭಾಧ್ಯಕ್ಷರಿಗೆ ವರದಿ ಸಲ್ಲಿಕೆ.
 
254 ಕೋಟಿ ರೂ. ಮೊತ್ತದ ಯೋಜನೆಗೆ ಸುಮಾರು 152 ಕೋಟಿ ರೂ. ಕೇಂದ್ರದಿಂದ ಅನುದಾನ ಬರುತ್ತಿತ್ತು. ರಾಜ್ಯ ಸರ್ಕಾರ ಕೇವಲ 101 ಕೋಟಿ ಮಾತ್ರ ನೀಡಬೇಕಾಗಿತ್ತು. ಆದರೆ ಈ ಮೇವಾ ಯೋಜನೆ ಜಾರಿ ಮಾಡಿದರೆ ಅಧಿಕಾರಿಗಳ ಜೇಬು ತುಂಬುವುದಿಲ್ಲ ಎಂಬ ಉದ್ದೇಶದಿಂದ ವಿಧಾನಸಭೆ ಸ್ಪೀಕರ್ ಪರಿಷತ್ತಿನ ಸಭಾಪತಿಗಳ ದಾರಿ ತಪ್ಪಿಸಿ ಇದನ್ನು ಖಾಸಗಿಯವರಿಗೆ ನೀಡಲು ಮುಂದಾಗಿದ್ದಾರೆ.
 
 
ಕರ್ನಾಟಕ ವಿಧಾನಸಭೆ ಅಧಿಕಾರಿಗಳಿಂದ ಈ ಯೋಜನೆ ಜಾರಿ ಕುರಿತು ಕಿಯೋನಿಕ್ಸ್‌ ಸಂಸ್ಥೆಗೆ ಪತ್ರ ಬರೆಯಲಾಗುತ್ತದೆ. ನಂತರ ಕಂಪನಿಯು ಈ ಯೋಜನೆ ನಾವೆ ಮಾಡುತ್ತೇವೆ. ಕೇರಳ ಮೂಲಕ ಕಂಪನಿಗಳ ಮೂಲಕ ಮಾಡುವುದಾಗಿ ಎಂದು ಪತ್ರ ಬರೆಯುತ್ತಾರೆ. ಆಗ ಆರ್ಥಿಕ ಇಲಾಖೆಗೆ ಪತ್ರ ಬರೆದು 254 ಕೋಟಿ ಹಣ ಬಿಡುಗಡೆ ಮಾಡುವಂತೆ ಕೋರಲಾಗುತ್ತದೆ.
 
ಇದರಲ್ಲಿ ಸಾಕಷ್ಟು ಅನುಮಾನಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂದು 19-12-2020ರಲ್ಲಿ ಕಿಯೋನಿಕ್ಸ್‌ ವರದಿಯ ಯೋಜನೆಗೆ ಹಣ ಬಿಡುಗಡೆ ಮಾಡದಂತೆ ಸರ್ಕಾರದ ಆರ್ಥಿಕ ಇಲಾಖೆಗೆ ಪತ್ರ ಬರೆಯುತ್ತಾರೆ.
 
ನಂತರ ಈ ಯೋಜನೆ ಫೈಲ್ ಅನ್ನು ಹಾಗೇ ಇಡುತ್ತಾರೆ. ನಂತರ ಮುಖ್ಯಕಾರ್ಯದರ್ಶಿಗಳ ನೇತೃತ್ವದ ಸಮಿತಿ ತನ್ನ ವರದಿ ನೀಡಿ ಕೇಂದ್ರ ಸರ್ಕಾರದ ಯೋಜನೆ ಉತ್ತಮವಾಗಿದೆ ಎಂದು ತಿಳಿಸಿತ್ತು. ಆದರೆ ಇತ್ತೀಚೆಗೆ 18-02-2021ರಲ್ಲಿ ವಿಧಾನ ಪರಿಷತ್ತಿನ ಸಭಾಪತಿಗಳು ವಿಧಾನಸಭೆಯ ಸಭಾಧ್ಯಕ್ಷರಿಗೆ ಪತ್ರ ಬರೆದು ಕಾಗದ ರಹಿತ ಯೋಜನೆಗೆ ಪತ್ಯೇಕವಾಗಿ ಅನುದಾನ ಬಿಡುಗಡೆಗೆ ಒತ್ತಾಯ ಮಾಡಲಾಗಿದೆ.
 
ಹೀಗಾಗಿ ವಿಧಾನಸಭೆಯ ಸಭಾಧ್ಯಕ್ಷರಿಗೆ ಪತ್ರ ಬರೆದು ಸಾರ್ವಜನಿಕ ಹಿತದೃಷ್ಟಿಯಿಂದ 254 ಕೋಟಿಯ ಯೋಜನೆಯನ್ನು ಖಾಸಗಿಯವರಿಗೆ ನೀಡದಂತೆ ಮನವಿ ಮಾಡಲಾಗಿದೆ. ಸ್ಪೀಕರ್ ಅವರು ಅಧಿಕಾರಿಗಳ ತಪ್ಪು ಮಾಹಿತಿಯಿಂದ ದಾರಿ ತಪ್ಪಬಾರದು, ಕೇಂದ್ರದ ಮೇವಾ ಯೋಜನೆ ಜಾರಿ ಮಾಡಲಿ. ಸಾರ್ವಜನಿಕರ ಹಣ ಸಂರಕ್ಷಣೆಗೆ ಮುಂದಾಗಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಸ್ಪೀಕರ್ ಅವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಈ ವಿಚಾರವಾಗಿ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು.
 
ವಿಧಾನಸಭೆಯಲ್ಲೇ ಈ ರೀತಿ ಹಗರಣ ನಡೆದರೆ ಬೇರೆ ಸಚಿವಾಲಯಗಳ ಪರಿಸ್ಥಿತಿ ಏನು? ಮೇವಾ ನಿಮ್ಮದೇ ಸರ್ಕಾರದ ಯೋಜನೆಯಾಗಿದ್ದು, ಅದನ್ನು ಬಳಸಿಕೊಳ್ಳಬೇಕು.  ಖಾಸಗಿಯವರಿಗೆ ಅವಕಾಶ ನೀಡಬಾರದು.
 
ರಾಜೀವ್ ಚಂದ್ರಶೇಖರ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫಾರ್ಮೇಷನ್ ಸಚಿವಾಲಯದ ಹಾಗೂ ಪ್ರಹ್ಲಾದ್ ಜೋಷಿ ಅವರ ಬಳಿ ಇರುವ ಸಂಸದೀಯ ವ್ಯವಹಾರಗಳ ಸಮಿತಿ ಅಡಿಯಲ್ಲಿ ಈ ಯೋಜನೆ ಬರಲಿದ್ದು, ರಾಜ್ಯ ಸರ್ಕಾರ ಮೇವಾ ಯೋಜನೆ ಜಾರಿಗೆ ಮುಂದಾದರೆ ಕೇಂದ್ರದಿಂದ ಬೇಗ ಅನುದಾನ ಪಡೆಯಬಹುದು.’
 
ಸ್ಪೀಕರ್ ಗಮನಕ್ಕೆ ಈ ವಿಚಾರ ಬಂದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ವಿಚಾರದ ಬಗ್ಗೆ ತಮಗೆ ಮಾಹಿತಿ ಇದೆಯೋ ಇಲ್ಲವೋ ಎಂದು ಸ್ಪೀಕರ್ ಅವರೇ ಹೇಳಬೇಕು. ಅವರ ಮೂಗಿನ ಕೆಳಗೆ ಇಷ್ಟು ದೊಡ್ಡ ಹಗರಣ ನಡೆಯುತ್ತಿದೆ. ಅವರ ಸಂವಿಧಾನತ್ಮಕ ಹುದ್ದೆಗೆ ಗೌರವ ನೀಡುತ್ತಾ ನಾವು ಅವರ ಮೇಲೆ ಆರೋಪ ಮಾಡುತ್ತಿಲ್ಲ. ಅವರು ಸಾರ್ವಜನಿಕ ಹಣವನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ಹೊತ್ತಿದ್ದು, ಈ ಕಾರಣಕ್ಕೆ ಈ ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ಹೇಳಿದರು.
 
ಇನ್ನು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂಬ ಸಚಿವ ಉಮೇಶ್ ಕತ್ತಿ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಬಿಜೆಪಿಯ ಅನೇಕ ನಾಯಕರಲ್ಲಿ ಸಿ.ಟಿ ರವಿ ಅವರು ಮಾತ್ರ ಕುಡಿದು ಓಡಾಡುತ್ತಾರೆ ಎಂದು ಭಾವಿಸಿದ್ದೆವು. ಬೇರೆ ನಾಯಕರು ಕುಡಿದು ಓಡಾಡುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ. ಕತ್ತಿ ಅರು ಎರಡು ದಿನಗಳ ಹಿಂದೆ 20224ರ ಚುನಾವಣೆ ನಂತರ ಕರ್ನಾಟಕ ಇಬ್ಬಾಗವಾಗಲಿದೆ ಎಂದು ಹೇಳಿದ್ದಾರೆ. ಇಂತರ ರಾಜಕೀಯ ಪ್ರೇರಿತ ಹಾಗೂ ರಾಜಕೀಯ ಅಸ್ಥಿತ್ವ ಉಳಿಸಿಕೊಳ್ಳಲು ಮಾಡುವ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸುತ್ತದೆ. ಕತ್ತಿ ಅವರು ಇಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ನಿಮಗೆ ಕುಡಿಯುವ ಚಟ ಇದ್ದರೆ ನಿಮ್ಮ ಮನೆಯಲ್ಲಿ ಕುಡಿದು ಮಾತನಾಡಿ. ಸಾರ್ವಜನಿಕವಾಗಿ ಇಂತಹ ಹೇಳಿಕೆ ಕೊಟ್ಟು ಜನರ ಮನಸ್ಸು ಒಡೆಯುವ ಕೆಲಸ ಮಾಡಬೇಡಿ. 1973ರಲ್ಲಿ ಅಖಂಡ ಕರ್ನಾಟಕ ರಚನೆಯಾದ ಬಳಿಕ ಎಲ್ಲ ಕನ್ನಡಿಗರು ಒಟ್ಟಾಗಿದ್ದೇವೆ. ಈ ರೀತಿ ಹೇಳಿಕೆಯಿಂದ ವಿಷಬೀಜ ಬಿತ್ತುವ ಕೆಲಸ ಮಾಡಬಾರದು’ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments