8 ತಿಂಗಳಲ್ಲಿ 28 ಬಾಣಂತಿಯರು ಸಾವು, ಕಾಂಗ್ರೆಸ್ ಸರ್ಕಾರದಿಂದ ಮಹಿಳೆಯರ ಕಗ್ಗೊಲೆ: ಅಶೋಕ್‌

Sampriya
ಶನಿವಾರ, 30 ನವೆಂಬರ್ 2024 (15:59 IST)
ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿ ಪೂರೈಕೆಯಿಂದ ಗರ್ಭಿಣಿ ಹಾಗು ಬಾಣಂತಿ ಮಹಿಳೆಯರ ಸಾವಾಗುತ್ತಿರುವುದಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ಕಾರಣವಾಗಿದ್ದು, ಕಾಂಗ್ರೆಸ್ ಸರ್ಕಾರ ಮಹಿಳೆಯರ ಕಗ್ಗೊಲೆ ಮಾಡಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. ಸ್ವಾಮಿ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಕುರ್ಚಿ ಉಳಿಸಿಕೊಳ್ಳಲು ಸ್ವಾಭಿಮಾನಿ ಸಮಾವೇಶ, ಸಂಪುಟ ಪುನಾರಚನೆ ಎಂದು ರಾಜಕೀಯದಾಳ ಎಸೆಯುವಲ್ಲಿ ತಾವು ತೋರುತ್ತಿರುವ ಆಸಕ್ತಿಯಲ್ಲಿ ಸ್ವಲ್ಪವಾದರೂ ಆಡಳಿತದಲ್ಲಿ ತೋರಿಸಿ. ಹೆರಿಗೆಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ಕುಟುಂಬದ ಮಹಿಳೆಯರಿಗೆ ಜೀವಂತವಾಗಿ ಮನೆಗೆ ಹೋಗುವ ಗ್ಯಾರೆಂಟಿ ಕೊಡಿ. ತಾಯಿ-ಮಗೂ ಸುರಕ್ಷಿತವಾಗಿ ಮನೆ ಸೇರುವ ಗ್ಯಾರೆಂಟಿ ಕೊಡಿ.

ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ವೈದ್ಯಕೀಯ ಶಿಕ್ಷಣ ಸಚಿವ ಎಸ್‌ ಶರಣ ಪ್ರಕಾಶ್ ಪಾಟೀಲ್‌ ಹಾಗು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹ್ಮದ್‌ ಅವರನ್ನ ಕೂಡಲೇ ಸಂಪುಟದಿಂದ ವಜಾ ಮಾಡಿ. ಬಾಣಂತಿ ಮಹಿಳೆಯರ ಸರಣಿ ಸಾವಿನ ಬಗ್ಗೆ ತಜ್ಞ ವೈದ್ಯರ ತನಿಖಾ ತಂಡ ನೀಡಿರುವ ವರದಿಯನ್ನ ಬಹಿರಂಗ ಮಾಡಿ ಈ ಪ್ರಕರಣವನ್ನ ಎಸ್ಐಟಿ ತನಿಖೆಗೆ ಒಪ್ಪಿಸಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments